22.8 C
Karnataka
Sunday, May 3, 2026

ಸುದ್ದಿ

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್‌ಗೆ ಡಿಪಿಆರ್ ತಯಾರಿ ಕಾರ್ಯ ಆರಂಭ

0
ಮಂಗಳೂರು: ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಹೆದ್ದಾರಿ ಸಚಿವಾಲಯದಿಂದ ಟೆಂಡರ್‌ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್‌...

ಬೆಳ್ತಂಗಡಿ: ಜೂನ್ 16ರ೦ದು ಲೋಕಾಯುಕ್ತ ಜನ ಸಂಪರ್ಕ ಸಭೆ

0
ಮಂಗಳೂರು: ಲೋಕಾಯುಕ್ತ ಜನ ಸಂಪರ್ಕ ಸಭೆ ಜೂನ್ 16 ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಆಯೋಜಿಸಲಾಗಿದೆ.ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜೂನ್ 16 ರಂದು ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ,...

ರೆಡ್‌ಕ್ರಾಸ್‌ನಿಂದ ನಾಗರಿಕ ಸುರಕ್ಷಾ ತರಬೇತಿ

0
ಮಂಗಳೂರು : ಸಮಾಜಮುಖಿ ಸೇವೆಗೆ ಇಡೀ ವಿಶ್ವದಲ್ಲೇ ರೆಡ್‌ಕ್ರಾಸ್ ಸಂಸ್ಥೆ ಅತ್ಯುತ್ತಮ ವೇದಿಕೆಯಾಗಿದೆ. ನಾಗರಿಕರ ಸುರಕ್ಷತೆಗೆ ರೆಡ್‌ಕ್ರಾಸ್ ವಿಶೇಷ ಅದ್ಯತೆ ನೀಡಿದ್ದು ಮುಂದಿನ ದಿನಗಳಲ್ಲಿ ರೆಡ್‌ಕ್ರಾಸ್ ಮೂಲಕ ನಾಗರಿಕ ಸುರಕ್ಷಾ ತರಬೇತಿ ನೀಡಲು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ರೆಡ್‌ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ , ನಿವೃತ್ತ ಎಡಿಜಿಪಿ ಭಾಸ್ಕರ ರಾವ್ಹೇಳಿದರು.ಸೋಮವಾರ...

ಎ೦ಆರ್‌ ಪಿಎಲ್‌ ಸಿಎಸ್‌ ಆರ್‌ ನಿಧಿಯಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ

0
ಮ೦ಗಳೂರು: ಮಾನಸಿಕ ರೋಗಿಗಳ ಸಾಮಾಜಿಕ ಪುನರ್ವಸತಿಗಾಗಿ ಸ್ಥಾಪಿಸಲ್ಪಟ್ಟು ಅವರ ಸೇವೆಯಲ್ಲಿ ನಿರತವಾಗಿರುವ ಸ್ನೇಹಾಲಯ ಸಂಸ್ಥೆಯ ವ್ಯಸನ ನಿವಾರಣಾ ಕೇಂದ್ರದಲ್ಲಿ ಎ೦ಆರ್‌ ಪಿಎಲ್‌ ಸಿಎಸ್‌ ಆರ್‌ ನಿಧಿಯಡಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆ ನೆರವೇರಿತು. ಎ೦ಆರ್‌ ಪಿಎಲ್‌ ಓಎನ್ ಜಿಸಿ ಮಂಗಳೂರಿನ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ಮಿಯಾರ್ ಅವರ ಪರವಾಗಿ...

ವಿ.ವಿ ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಆಯ್ಕೆ

0
ಮಂಗಳೂರು : 2025-26ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ((Day & Evening Programme) ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು ಮಂಗಳಗಂಗೋತ್ರಿ/ವಿಶ್ವವಿದ್ಯಾನಿಲಯ ಕಾಲೇಜು, ನೆಲ್ಯಾಡಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು, ಬನ್ನಡ್ಕ, ಮೂಡಬಿದಿರೆ ಇಲ್ಲಿಯ ಪದವಿ ಕಾರ್ಯಕ್ರಮಗಳಿಗೆ (UG) ಈ ಕೆಳಕಂಡ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು,...

ಮರವೂರು ಸೇತುವೆ-ಮರಕಡ ರಸ್ತೆ ಅಗಲೀಕರಣ, ತುರ್ತು ರಿಪೇರಿಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಆಗ್ರಹ

0
ಮಂಗಳೂರು: ಮಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಮರವೂರು ಸೇತುವೆಯಿಂದ ಮರಕಡ ನಡುವಿನ ರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ದಿಪಡಿಸುವುದಕ್ಕೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಪತ್ರ ಬರೆದಿದ್ದಾರೆ. ಮಂಗಳೂರು ನಗರದಿಂದ ಏರ್ ಪೋರ್ಟ್ ಗೆ...

ಮೀನುಗಾರರ ಸುರಕ್ಷತೆ – ಸಚಿವರಿಂದ ಸಭೆ

0
ಮಂಗಳೂರು, ಜೂ.6(ಕ.ವಾ):- ಕಡಲಿನಲ್ಲಿ ಮೀನುಗಾರರ ಸುರಕ್ಷತಾ ಕ್ರಮಗಳು ಮತ್ತು ನಿಯಮಾವಳಿಗಳನ್ನು ಬಲಪಡಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಂಗಳೂರಿನ ಕೋಸ್ಟ್‍ಗಾರ್ಡ್ ಕಚೇರಿಯಲ್ಲಿ ಸಭೆ ನಡೆಯಿತು.ಸಚಿವರು ಮಾತನಾಡಿ, ಮೀನುಗಾರ ಸಮುದಾಯದ ಜೀವನೋಪಾಯವನ್ನು ರಕ್ಷಿಸಲು ಸರಕಾರ ಎಲ್ಲ ಕ್ರಮ ಕೈಗೊಳ್ಳಲಿದೆ. ಮೀನುಗಾರರು ತಮ್ಮ ಜೀವವನ್ನು...

ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ – ಸಚಿವರಿಂದ ವಿತರಣೆ

0
ಮಂಗಳೂರು: ಮೇ 29ರಂದು ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಭೇಟಿ ನೀಡಿದರು.ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವರು, ಪ್ರತಿ ಕುಟುಂಬಕ್ಕೆ ಮಿನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿಗಳ ಚೆಕ್ ವಿತರಿಸಿದರು. ನಾಪತ್ತೆಯಾದವರಿಗಾಗಿ...

ಕರ್ನಾಟಕ ಭಾರತ ಗೌರವ ದಕ್ಷಿಣ ಯಾತ್ರೆ

0
ಮ೦ಗಳೂರು: ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ಇಲಾಖೆ ಹಾಗೂ ಐಆರ್‌ಸಿಟಿಸಿ ಸಹಯೋಗದಲ್ಲಿ “ಕರ್ನಾಟಕ ಭಾರತ ಗೌರವ ದಕ್ಷಿಣ ಯಾತ್ರೆ”ಯನ್ನು ಪ್ರಾರಂಭಿಸಲಾಗಿದೆ. ಈ ವಿಶೇಷ ಪ್ರವಾಸ ರೈಲಿನಲ್ಲಿ, ಭಾರತೀಯ ಪೌರಾಣಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ ಕನ್ಯಾಕುಮಾರಿ, ತಿರುವನಂತಪುರಂ, ರಾಮೇಶ್ವರಂ ಮತ್ತು ಮದುರೈ ಕ್ಷೇತ್ರಗಳನ್ನು ಒಳಗೊಂಡಿರುತ್ತವೆ. ಪ್ರವಾಸದ ವಿವರಗಳು: ಯಾತ್ರೆ ಅವಧಿ: 25 ಜೂನ್...

ರೆಡ್ ಕ್ರಾಸ್ ವತಿಯಿಂದ ಪರಿಸರ ದಿನಾಚರಣೆ

0
ಮಂಗಳೂರು : ಅತಿಯಾದ ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ಮಾರಕವಾಗಿ ಪರಿಣಮಿಸಿದೆ. ಪ್ಲಾಸ್ಟಿಕ್ ಬಳಕೆ ನಿರ್ಮೂಲನೆಯಾಗದಿದ್ದರೆ ಪೃಥ್ವಿಯ ಅವನತಿಯೂ ಸನಿಹವಾಗಲಿದೆ. ಪರಿಸರ ಸಂರಕ್ಷಣೆಯಾದಲ್ಲಿ ಮಾತ್ರ ಮನುಷ್ಯನ ಆರೋಗ್ಯ ಸಂರಕ್ಷಣೆ ಸಾಧ್ಯ ಎಂದು ಪರಿಸರವಾದಿ, ಗುಜರಾತ್ ನ ಸ್ಮೃತಿ ವನದ ರೂವಾರಿ ಡಾ.ಆರ್.ಕೆ.ನಾಯರ್ ಹೇಳಿದರು.ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಗುರುವಾರ ನಡೆದ ಪರಿಸರ...