26.6 C
Karnataka
Friday, November 22, 2024
Home ರಾಜಕೀಯ

ರಾಜಕೀಯ

ಬಿಜೆಪಿ ಲೋಕಸಭಾ ಚುನಾವಣಾ ಕಚೇರಿ ಉದ್ಘಾಟನೆ

0
ಮ೦ಗಳೂರು: ಭಾರತೀಯ ಜನತಾ ಪಾರ್ಟಿಯ ಲೋಕಸಭಾ ಚುನಾವಣಾ ಕಚೇರಿ ಬಂಟ್ಸ್ ಹಾಸ್ಟೆಲ್ ಬಳಿ ಗುರುವಾರ ಉದ್ಘಾಟನೆಗೊ೦ಡಿತು. ಸ೦ಸದ ನಳಿನ್‌ ಕುಮಾರ್‌ ಕಟೀಲು ಅವರು ಅವರು ಕಚೇರಿಯನ್ನು ಉದ್ಘಾಟಿಸಿದರು.ಈ ಕಚೇರಿ ಭಾರತೀಯ ಜನತಾ ಪಾರ್ಟಿಯ ಪಾಲಿಗೆ ಅದೃಷ್ಟದ ಕಚೇರಿಯಾಗಿದ್ದು 2004 ರಿ೦ದ ನಡೆದ ಎಲ್ಲಾ ಚುನಾವಣೆಗಳಲ್ಲಿ ಈ ಚುನಾವಣಾ ಕಚೇರಿ ಬಿಜೆಪಿ ಪಾಲಿಗೆ ಜಯತ೦ದು ಕೊಟ್ಟಿದೆ.ಈ...

ವಿಕಸಿತ ಭಾರತದ ಗುರಿ ಸಾಧನೆಗೆ ಮೋದಿ ಮತ್ತೆ ಪ್ರಧಾನಿಯಾಗಬೇಕು: ಪ್ರತಾಪ್ ಸಿಂಹ ನಾಯಕ್

0
ಮಂಗಳೂರು: ದೇಶದ ಅಭಿವೃದ್ಧಿ, ಭಾರತವನ್ನು ಜಗತ್ತಿನಲ್ಲೇ ನಂಬರ್ ಒನ್ ರಾಷ್ಟ್ರವಾಗಿ ಕಟ್ಟಿ ಬೆಳೆಸುವ ದೂರದೃಷ್ಟಿ ಹೊಂದಿರುವ ಮತ್ತು ಈಗಾಗಲೇ ಜಾಗತಿಕ ಅರ್ಥವ್ಯವಸ್ಥೆಯಲ್ಲಿ ಭಾರತವನ್ನು 5ನೇ ಸ್ಥಾನಕ್ಕೇರಿಸಿದ ಸಮರ್ಥ ಹಾಗೂ ಬಲಿಷ್ಠ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪುನರಾಯ್ಕೆ ಮಾಡುವುದು ನಿಜವಾದ ದೇಶಪ್ರೇಮಿಗಳೆಲ್ಲರ ಹೊಣೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ:ಪದ್ಮರಾಜ್ ಆರ್. ಪೂಜಾರಿ

0
ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.ರಾಜಕೀಯದ ಕನಸು ಕಂಡವನು ನಾನಲ್ಲ. ಆದರೆ ಎಲ್ಲರ ಒತ್ತಾಸೆಯ ಮೇರೆಗೆ ರಾಜಕೀಯಕ್ಕೆ ಬರುವಂತಾಯಿತು. ನಾರಾಯಣಗುರುಗಳ ಆದರ್ಶವನ್ನೇ ಮೂಲವಾಗಿಟ್ಟುಕೊಂಡು ಸಾಮಾಜಿಕ ಕಾರ್ಯಗಳಿಗೆ ಮುಂದಾದೆ. ಇಂದು ರಾಜಕೀಯದ ಅವಕಾಶವೂ...

ಪುತ್ತೂರಿನ ಅಭಿವೃದ್ಧಿಯ ಕನಸಿಗೆ ಕೈಜೋಡಿಸುತ್ತೇನೆ: ಪದ್ಮರಾಜ್ ಆರ್.

0
ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರ ಸಭೆ ಸೋಮವಾರ ಮಂಜಲ್ಪಡ್ಪು ಉದಯಗಿರಿ ಸಭಾಭವನದಲ್ಲಿ ನಡೆಯಿತು.ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ರಾಜ್ಯದಿಂದ ಸಮೀಕ್ಷೆ ನಡೆಸುತ್ತಿದ್ದಾರೆ. ಅವರು ಕರೆ ಮಾಡಿ ತಿಳಿಸಿದರು, ಸ್ವಲ್ಪ ಪ್ರಯತ್ನ ಮಾಡಿದರೆ 75ರಿಂದ 1 ಲಕ್ಷದ ಮತದ ಅಂತರದಿಂದ ಗೆಲ್ಲಬಹುದು. ಆದ್ದರಿಂದ ಈ ಬಾರಿ ನಮ್ಮ ಪ್ರಯತ್ನವನ್ನು ಹೆಚ್ಚು ಹಾಕಿ, ಅಭ್ಯರ್ಥಿಯನ್ನು...

ದೇಶದಲ್ಲಿ ಭಾರತೀಯ ಜನತಾ ಪಾರ್ಟಿ ಪರವಾದ ಅಲೆ : ನಳಿನ್ ಕುಮಾರ್ ಕಟೀಲು

0
ಮಂಗಳೂರು: ಮಹಾ ಚುನಾವಣೆಗೆ ಮೊದಲ ಹಂತ ಹಾಗೂ ಎರಡನೇ ಹಂತದ ನಾಮಪತ್ರ ಸಲ್ಲಿಕೆ ಕೂಡ ಮುಗಿದಿದೆ. ಇಡೀ ದೇಶದಲ್ಲಿ ಭಾರತೀಯ ಜನತಾ ಪಾರ್ಟಿಯ ಪರವಾದ ಅಲೆ ಕಾಣುತ್ತಿದೆ. ದೇಶದ ಜನ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಬಯಸಿದ್ದಾರೆ. ಅಭಿವೃದ್ಧಿಶೀಲ ಭಾರತ ವಿಕಸಿತ ಭಾರತವಾಗಿ ರೂಪುಗೊಳ್ಳುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಜಿಲ್ಲಾ...

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ :ನಾಯಕರು, ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹ

0
ಮ೦ಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸೂಕ್ತ ಅಭ್ಯರ್ಥಿ ಆಯ್ಕೆ ವಿಚಾರವಾಗಿ ದ.ಕ.ಜಿಲ್ಲಾ ಲೋಕಸಭಾ ಚುನಾವಣಾ ಉಸ್ತುವಾರಿ ಮಧು ಬಂಗಾರಪ್ಪ ಅವರು ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಸಿ ನಾಯಕರು, ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿದರು. ಮಾಜಿ‌ ಸಂಸದ ಬಿ ಇಬ್ರಾಹಿಂ, ಮಾಜಿ ಸಚಿವರಾದ ಗಂಗಾಧರ ಗೌಡ, ಅಭಯಚಂದ್ರ ಜೈನ್, ಇಬ್ರಾಹಿಂ ಕೊಡಿಜಾಲ್, ಮಾಜಿ ಶಾಸಕ...

ಮೀನುಗಾರರು ದೇಶದ ಜಲಸೈನಿಕರು: ಕ್ಯಾಪ್ಟನ್ ಬೃಜೇಶ್ ಚೌಟ

0
ಮಂಗಳೂರು: ಮೊಗವೀರ ಸಮುದಾಯದವರು ದೇಶದ ಸಾಗರ ಗಡಿಯ ನಿಜವಾದ ರಕ್ಷಕರು. ಭಾರತೀಯ ನೌಕಾಪಡೆ ರಚನೆಗೂ ಮೊದಲೇ ಜಲಪ್ರದೇಶದ ಗಡಿಯನ್ನು ರಕ್ಷಿಸುತ್ತ ಬಂದವರು ಮೀನುಗಾರ ಸಮುದಾಯದವರು. ಸಮುದಾಯದ ದೇಶಭಕ್ತಿ, ಹಿಂದುತ್ವದ ನಿಷ್ಠೆ ಅಪಾರವಾದುದು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಹೇಳಿದರು. ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ ಪಕ್ಷದ...

ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಶಾಸಕ ಹರೀಶ್ ಪೂಂಜ

0
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ಹತಾಶೆಯ ಭಾವನೆಯಿಂದ ಕೂಡಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೂ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿರುವುದು ವೇದ್ಯವಾಗುತ್ತದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಲೇವಡಿ ಮಾಡಿದರು. ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಬುಧವಾರ...

ಲೋಕಸಭಾ ಚುನಾವಣೆ : ಕಾಂಗ್ರೆಸ್ ವೀಕ್ಷಕರ ನೇಮಕ

0
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರ ಹಾಗೂ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಗೆ ಪಕ್ಷದದಿಂದ ವೀಕ್ಷಕರನ್ನು ನೇಮಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.ವಿಧಾನ ಸಭಾಕ್ಷೇತ್ರ: ಬೆಳ್ತಂಗಡಿ ಕ್ಷೇತ್ರ-ಎಂ.ಎಸ್.ಮಹಮ್ಮದ್, ಮೂಡಬಿದ್ರೆ ಕ್ಷೇತ್ರ - ಮಹಾಬಲ ಮಾರ್ಲ, ಮಂಗಳೂರು ನಗರ ಉತ್ತರ ಕ್ಷೇತ್ರ - ಕೆ.ಶುಭೋದಯ ಆಳ್ವ, ಮಂಗಳೂರು ನಗರದಕ್ಷಿಣ ಕ್ಷೇತ್ರ - ಪ್ರತಿಭಾ ಕುಳಾಯಿ, ಮಂಗಳೂರು ಕ್ಷೇತ್ರ...

ಮಹಿಳಾ ಮೋರ್ಚದ ಕಾರ್ಯಕಾರಿಣಿ ಸಭೆ ಹಾಗೂ ಪದಗ್ರಹಣ

0
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮೋರ್ಚದ ಕಾರ್ಯಕಾರಿಣಿ ಸಭೆ ಹಾಗೂ ಪದಗ್ರಹಣ ಕಾರ್ಯಕ್ರಮವು ಬಿಜೆಪಿ ಕಚೇರಿಯಲ್ಲಿ ನಡೆಯಿತು ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ನಿಕಟಪೂರ್ವ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಧನಲಕ್ಷ್ಮಿ ಗಟ್ಟಿಯವರು ಜವಾಬ್ದಾರಿಯನ್ನು ನೂತನ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಡಾ. ಮಂಜುಳಾ ಅನಿಲ್ ರಾವ್ ಅವರಿಗೆ ಹಸ್ತಾಂತರಿಸಿದರು.ಈ...