26.6 C
Karnataka
Friday, November 22, 2024

ರಾಜಕೀಯ

ಕ್ಯಾ. ಚೌಟರು ಅತಿದೊಡ್ಡ ಅಂತರದಿಂದ ಗೆಲುವು ಸಾಧಿಸಲು ಶ್ರಮ : ಅಣ್ಣಾಮಲೈ

0
ಮಂಗಳೂರು: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿಯಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪ್ರಣಾಳಿಕೆ ಬಿಡುಗಡೆಯಾಗಿದೆ. 2019ರಲ್ಲಿ ಬಿಜೆಪಿ ಕೇಂದ್ರ ಪಕ್ಷದ ಪ್ರಣಾಳಿಕೆಯಲ್ಲಿ 295 ಅಂಶಗಳಿದ್ದವು. ಅವುಗಳನ್ನು ಸರಕಾರ ಪೂರ್ಣವಾಗಿ ಜಾರಿಗೊಳಿಸಿದೆ. ಈಗ 2024ರ ಪ್ರಣಾಳಿಕೆಯನ್ನೂ ಪ್ರಧಾನಿ ಮೋದಿಯವರು ಪ್ರಕಟಿಸಿದ್ದಾರೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಅವರು ಹೇಳಿದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ...

ಮೋರ್ಗನ್ಸ್ ಗೇಟ್ ನಲ್ಲಿ ರೋಡ್ ಶೋ ನಡೆಸಿ ಮತ ಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

0
ಮಂಗಳೂರು: ಇಲ್ಲಿನ ಮೋರ್ಗನ್ಸ್ ಗೇಟ್, ಬೋಳಾರ ಪರಿಸರದಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ರೋಡ್ ಶೋ ನಡೆಸಿ, ಮತ ಯಾಚಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಉತ್ತಮ ಆಡಳಿತ ನೀಡಿರುವ ಕಾಂಗ್ರೆಸ್ ಮೇಲೆ ಜನರು ಭರವಸೆ ಇಟ್ಟಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ...

ಕಾಂಗ್ರೆಸ್ ಸರಕಾರ ಬಂದಾಗೆಲ್ಲ ಆತಂಕವಾದ ತಾಂಡವ: ನಳಿನ್ ಕುಮಾರ್ ಕಟೀಲ್

0
ಮಂಗಳೂರು: ರಾಜ್ಯದಲ್ಲಿ ಯಾವಾಗೆಲ್ಲ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬರುತ್ತದೋ ಆಗೆಲ್ಲ ಈ ರಾಜ್ಯದಲ್ಲಿ ಆತಂಕವಾದ ತಾಂಡವವಾಡುತ್ತದೆ. ಕಾಂಗ್ರೆಸ್ ಗೆ ಬಹುಮತ ಬಂದು ಮೆರವಣಿಗೆ ಮಾಡುವಾಗ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗುತ್ತದೆ. ರಸ್ತೆಯಲ್ಲಿ ಮೊಳಗಿದ ಆ ಘೋಷಣೆ, ವಿಧಾನ ಸೌಧದೊಳಗೂ ವ್ಯಾಪಿಸುತ್ತದೆ. ದೇಶವಿರೋಧಿ ಹೇಳಿಕೆ ಕೊಟ್ಟವರನ್ನು ಬಂಧಿಸಬೇಕು ಎಂದು ಬಿಜೆಪಿ ಆಗ್ರಹಿಸಿದರೂ ಅವರನ್ನು ಕಾಂಗ್ರೆಸ್...

ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ

0
ಮಂಗಳೂರು: ಮಂಗಳೂರು ದಕ್ಷಿಣ ವಿಭಾಗದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಅಧ್ಯಕ್ಷ ಹಾಗೂ ಮಾಜಿ ಮೇಯರ್ ದಿವಾಕರ ಪಾಂಡೇಶ್ವರ ಅವರ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಸ್ಟೇಟ್‌ಬ್ಯಾಂಕ್ ವ್ಯಾಪ್ತಿಯಲ್ಲಿ ಶುಕ್ರವಾರ ನಡೆಯಿತು.ಸುಮಾರು 100ಕ್ಕೂ ಅಧಿಕ ಕಾರ್ಯಕರ್ತರು ಕೇಸರಿ ಪೇಟಾ ಧರಿಸಿ ಎ.ಬಿ.ಶೆಟ್ಟಿ ಸರ್ಕಲ್‌ನಿಂದ, ಹ್ಯಾಮಿಲ್ಟನ್ ವೃತ್ತ, ರಾವ್ ಆ್ಯಂಡ್ ವೃತ್ತ ಹಾಗೂ...

ರೈಲ್ವೇ ಇಲಾಖೆ ಮಾರಾಟ ಹುನ್ನಾರ : ಸದಾಶಿವ ಉಳ್ಳಾಲ್ ಆರೋಪ

0
ಮಂಗಳೂರು: ಭೂನ್ಯಾಯ ಮಂಡಳಿ, ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ ನಿಲ್ದಾಣ ಬಂದಿದ್ದು ಕಾಂಗ್ರೆಸ್ ಅವಧಿಯಲ್ಲಿ, ಆದರೆ ಇವೆಲ್ಲವನ್ನೂ ಮಾರಾಟ ಮಾಡಿರುವ ಮೋದಿಯವರು ಈಗ ರೈಲ್ವೇ ಇಲಾಖೆಯನ್ನೂ ಧನಿಗಳಿಗೆ ಮಾರಾಟ ಮಾಡುವ ಹುನ್ನಾರ ನಡೆಸಿದ್ದಾರೆಂದು ಮೂಡಾದ ಅಧ್ಯಕ್ಷ ಸದಾಶಿವ ಉಳ್ಳಾಲ್ ಆರೋಪಿಸಿದ್ದಾರೆ.ಶನಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ...

ನಾರಾವಿಯಿಂದ ಅಳದಂಗಡಿವರೆಗೆ ಕಾಂಗ್ರೆಸ್ ರೋಡ್ ಶೋ

0
ಅಳದಂಗಡಿ: ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂದು ಕರೆ ನೀಡಿದ ನಾರಾಯಣಗುರುಗಳು, ಇದನ್ನ ಬಿಲ್ಲವ ಸಮುದಾಯಕ್ಕಷ್ಟೇ ಹೇಳಿಲ್ಲ. ಹಿಂದುಳಿದ ವರ್ಗಗಳ ಎಲ್ಲಾ ಸಮುದಾಯಗಳನ್ನು ಉದ್ದೇಶಿಸಿ ಹೇಳಿದ್ದರು ಎಂದು ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಹೇಳಿದರು.ನಾರಾವಿಯಿಂದ ಅಳದಂಗಡಿವರೆಗೆ ಕಾಂಗ್ರೆಸ್ ರೋಡ್ ಶೋ ಬಳಿಕ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್....

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ

0
ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ ಪ್ರಚಾರ ಕಾರ್ಯಕ್ಕೆ ಮುಂದಾದ ಪದ್ಮರಾಜ್ ಆರ್. ಪೂಜಾರಿ ಅವರು, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ರೋಡ್ ಶೋ ಆರಂಭಿಸಿದರು....

ಪ್ರಧಾನಿ ರೋಡ್‌ ಶೋ ಭರ್ಜರಿ ಯಶಸ್ಸು: ಸತೀಶ್ ಕುಂಪಲ

0
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್‌ ಶೋ ಭರ್ಜರಿ ಯಶಸ್ಸು ಕಂಡಿದ್ದು, ಲಕ್ಷಾಂತರ ಜನರು ತಮ್ಮ ನೆಚ್ಚಿನ ನಾಯಕನ್ನು ಹತ್ತಿರದಿಂದ ಕಂಡು ಸಂಭ್ರಮಿಸಿದರು ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಪ್ರಧಾನಿ ಮೋದಿ ಅವರಿಗೆ ದ.ಕ ಜಿಲ್ಲಾ ಬಿಜೆಪಿ ಹಾಗೂ ಜನತೆಯ ವತಿಯಿಂದ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು. ಜಿಲ್ಲಾ...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ:ಪದ್ಮರಾಜ್ ಆರ್. ಪೂಜಾರಿ

0
ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.ರಾಜಕೀಯದ ಕನಸು ಕಂಡವನು ನಾನಲ್ಲ. ಆದರೆ ಎಲ್ಲರ ಒತ್ತಾಸೆಯ ಮೇರೆಗೆ ರಾಜಕೀಯಕ್ಕೆ ಬರುವಂತಾಯಿತು. ನಾರಾಯಣಗುರುಗಳ ಆದರ್ಶವನ್ನೇ ಮೂಲವಾಗಿಟ್ಟುಕೊಂಡು ಸಾಮಾಜಿಕ ಕಾರ್ಯಗಳಿಗೆ ಮುಂದಾದೆ. ಇಂದು ರಾಜಕೀಯದ ಅವಕಾಶವೂ...

ಇದು ರಾಷ್ಟ್ರೀಯ ಚುನಾವಣೆ; ರಾಷ್ಟ್ರೀಯತೆ, ಅಭಿವೃದ್ಧಿ, ದೇಶದ ಭದ್ರತೆಯೇ ಇಲ್ಲಿ ಮುಖ್ಯ: ಶಾಸಕ ಉಮಾನಾಥ ಕೋಟ್ಯಾನ್

0
ಮಂಗಳೂರು: ಈ ಲೋಕಸಭಾ ಚುನಾವಣೆಯು ದೇಶದ ಭವಿಷ್ಯ ನಿರ್ಧರಿಸುವ ಚುನಾವಣೆ. ಸ್ಥಳೀಯ ಚುನಾವಣೆಗಳ ವಿಚಾರಗಳೇ ಬೇರೆ. ರಾಷ್ಟ್ರೀಯ ಚುನಾವಣೆಯ ವಿಚಾರಗಳೇ ಬೇರೆ. ರಾಷ್ಟ್ರೀಯತೆಯ ಬಗ್ಗೆ, ದೇಶದ ನಾಯಕತ್ವದ ಬಗ್ಗೆ ಚಿಂತನೆ ಮಾಡಿ ಮತದಾನ ಮಾಡುವ ಸಂದರ್ಭವಿದು. ಇಲ್ಲಿ ಜಾತಿ- ಧರ್ಮದ ಆಧಾರದಲ್ಲಿ ಭಿನ್ನತೆಗಳಿಗೆ ಅವಕಾಶವೇ ಇಲ್ಲ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಜಿಲ್ಲಾ ಬಿಜೆಪಿ...