ಮೀನುಗಾರರು ದೇಶದ ಜಲಸೈನಿಕರು: ಕ್ಯಾಪ್ಟನ್ ಬೃಜೇಶ್ ಚೌಟ
ಮಂಗಳೂರು: ಮೊಗವೀರ ಸಮುದಾಯದವರು ದೇಶದ ಸಾಗರ ಗಡಿಯ ನಿಜವಾದ ರಕ್ಷಕರು. ಭಾರತೀಯ ನೌಕಾಪಡೆ ರಚನೆಗೂ ಮೊದಲೇ ಜಲಪ್ರದೇಶದ ಗಡಿಯನ್ನು ರಕ್ಷಿಸುತ್ತ ಬಂದವರು ಮೀನುಗಾರ ಸಮುದಾಯದವರು. ಸಮುದಾಯದ ದೇಶಭಕ್ತಿ, ಹಿಂದುತ್ವದ ನಿಷ್ಠೆ ಅಪಾರವಾದುದು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಹೇಳಿದರು.
ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ ಪಕ್ಷದ...
ಚುನಾವಣೆ ಕಾರ್ಯತಂತ್ರ: ಜಿಲ್ಲಾ ಬಿಜೆಪಿ ಪ್ರಮುಖರ ಮಹತ್ವದ ಸಭೆ
ಮಂಗಳೂರು: ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯ ದೃಷ್ಟಿಯಿಂದ ಬಿಜೆಪಿ ಜಿಲ್ಲಾ ಪ್ರಮುಖರ ಸಭೆಯು ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು. ರಾಜ್ಯದ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಯವರು ಈವರೆಗೆ ನಡೆದ ಚುನಾವಣಾ ಬೂತ್ ಕಾರ್ಯಗಳ ಬಗ್ಗೆ ವರದಿಯನ್ನು ಪಡೆದರು.
ಇನ್ನಷ್ಟು ಮತದಾರರನ್ನು ತಲುಪಲು ಕೈಗೊಳ್ಳಬೇಕಾಗಿರುವ ಕಾರ್ಯಚಟುವಟಿಕೆಗಳ ಬಗ್ಗೆ ಗಮನಹರಿಸಿ ಮತ್ತಷ್ಟು ವೇಗದಲ್ಲಿ...
ಕಾವೂರು: ಕಾಂಗ್ರೆಸ್ ಕಾರ್ಯಕರ್ತರ ಸಭೆ
ಸುರತ್ಕಲ್: ಮಂಗಳೂರು ವಿಧಾನಸಭಾ ಕ್ಷೇತ್ರದ ಸುರತ್ಕಲ್ ಮತ್ತು ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ಬಿಜೆಪಿಗೆ ಸೋಲಿನ ಭಯ ಈಗಲೇ ಶುರುವಾಗಿದೆ. ಅದಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಆರಂಭಿಸಿದ್ದಾರೆ. ಆದರೆ ತಾನು...
ರಾಜ್ಯದ ಆರ್ಥಿಕ ನಿರ್ವಹಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿಫಲ: ಪ್ರತಾಪ್ ಸಿಂಹ ನಾಯಕ್
ಮಂಗಳೂರು: ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ಸೋತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ಮರೆಮಾಚಲು ಕೇಂದ್ರ ಸರಕಾರವನ್ನು ದೂರುವ ನಾಟಕ ಆಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹೇಳಿದರು.
ದಕ್ಷಿಣ ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಅವರು ತಮ್ಮ ತಪ್ಪು ಮುಚ್ಚಿಕೊಳ್ಳಲು ದಿನಕ್ಕೊಂದು ನಾಟಕವಾಡುತ್ತಿದ್ದಾರೆ...
ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ
ಬೆಳ್ತಂಗಡಿ: ಕಾಂಗ್ರೆಸ್'ನ ಲೋಕಸಭಾ ಚುನಾವಣಾ ಕಚೇರಿಯನ್ನು ಬೆಳ್ತಂಗಡಿ ಹೇರಾಜೆ ಕಾಂಪ್ಲೆಕ್ಸ್'ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಉದ್ಘಾಟಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಬೆಳ್ತಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್...
ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಶಾಸಕ ಹರೀಶ್ ಪೂಂಜ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ಹತಾಶೆಯ ಭಾವನೆಯಿಂದ ಕೂಡಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೂ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿರುವುದು ವೇದ್ಯವಾಗುತ್ತದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಲೇವಡಿ ಮಾಡಿದರು.
ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಬುಧವಾರ...
ಕುದ್ರೋಳಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಚಾಲನೆ
ಮಂಗಳೂರು: ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಪ್ರಚಾರಕ್ಕೆ ಮಂಗಳವಾರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಯಿತು.ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಕಾಂಗ್ರೆಸ್ ಧ್ವಜವನ್ನು ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಹಸ್ತಾಂತರಿಸುವ ಮೂಲಕ ಚುನಾವಣಾ ಆರಂಭಗೊಂಡಿತು.ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ,...
ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
ಮಂಗಳೂರು:“ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾನು ಪ್ರತಿ ಬಾರಿ ಧರ್ಮ ಯುದ್ಧದ...
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ. 3ರಂದು ನಾಮಪತ್ರ ಸಲ್ಲಿಕೆ: ಹರೀಶ್ ಕುಮಾರ್
ಮಂಗಳೂರು: ದ.ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಏಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎ೦ದು ದ.ಕನ್ನಡ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು.ಜಿಲ್ಲಾ ಕಾ೦ಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ....
ಅಭಿವೃದ್ಧಿ ಮತ್ತು ಕಾಂಗ್ರೆಸ್- ಎರಡೂ ವಿರೋಧ ಪದಗಳು:ದತ್ತಾತ್ರೇಯ
ಮಂಗಳೂರು: ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿಯ ಮಾತೇ ಇಲ್ಲವಾಗಿದೆ. ವಾಸ್ತವಿಕ ಅರ್ಥದಲ್ಲಿ ಕಾಂಗ್ರೆಸ್ ಮತ್ತು ಅಭಿವೃದ್ಧಿ ಎರಡೂ ವಿರೋಧ ಪದಗಳು ಎಂದು ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕ ದತ್ತಾತ್ರೇಯ ಅವರು ಹೇಳಿದರು.
ದ.ಕ. ಜಿಲ್ಲಾ ಬಿಜೆಪಿ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಸರಕಾರ ಬಂದ ಮೇಲೆ...