ಜೂನ್ 29: ಸಿ.ಎಸ್.ಕೆ. ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 30 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ
ಮ೦ಗಳೂರು: ಕ್ಯಾಥೋಲಿಕ್ ಎಸೋಸಿಯೇಶನ್ ಆಫ್ ಸೌತ್ ಕೆನರಾ (ಸಿ.ಎಸ್.ಕೆ) ಹಾಗೂ ಸಿ.ಎಸ್.ಕೆ ಸೆಂಟನರಿ ಟ್ರಸ್ಟ್ ಜಂಟಿಯಾಗಿ ನಡೆಸುವ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ, 30 ಲಕ್ಷ ರೂಪಾಯಿಗಿಂತ ಹೆಚ್ಚು ಮೊತ್ತದ ವಿದ್ಯಾಥಿ೯ವೇತನ ವಿತರಿಸಲಾಗುವುದು. ಈ ವಿದ್ಯಾರ್ಥಿವೇತನವನ್ನು ಯಾವುದೇ ಧರ್ಮ, ಭಾಷೆ, ಅಂಕ ಪರಿಗಣಿಸದೆ ಅಜಿ೯ದಾರರ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ, ಮಂಜೂರು...
ವಸತಿ ಶಾಲೆಗಳಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಮಂಗಳೂರು: ಜಿಲ್ಲೆಯಲ್ಲಿ ಮೊರಾರ್ಜಿ ದೇಸಾಯಿ/ ಡಾ. ಬಿ. ಆರ್. ಅಂಬೇಡ್ಕರ್/ ಇಂದಿರಾ ಗಾಂಧಿ/ನಾರಾಯಣ ಗುರು ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ 7 ಮತ್ತು 8ನೇತರಗತಿಯಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಖಾಲಿ ಉಳಿದಿರುವ ಶಾಲೆಗಳು :ಮಂಗಳೂರಿನ ನೆಲ್ಲಿತೀರ್ಥ, ಗುರುಪುರ, ಮೂಡಬಿದ್ರೆಯ ಕಲ್ಲಬೆಟ್ಟು, ಮೂಲ್ಕಿಯ ಕಮ್ಮಾಜೆ, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ ,ಬಂಟ್ವಾಳದ ವಗ್ಗ....
ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಜೂನ್ 14 ರಂದು ತೆರೆಗೆ
ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ "ತುಡರ್" ತುಳು ಸಿನಿಮಾ ಜೂನ್ 14 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್...
ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ ಆಯ್ಕೆ
ಮಂಗಳೂರು ಮಂಗಳೂರು ವಕೀಲರ ಸಂಘದ 2024-26 ರ ಪದಾಧಿಕಾರಿಗಳ ಆಯ್ಕೆ ಚುನಾವಣೆ ಮೂಲಕ ಜೂ-7 ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ಜರಗಿತು.ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ, ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ್ ಎಚ್, ಜತೆ ಕಾರ್ಯದರ್ಶಿಯಾಗಿ ಜ್ಯೋತಿ ಮತ್ತು ಖಜಾಂಚಿಯಾಗಿ ಗಿರೀಶ್ ಶೆಟ್ಟಿ ಅವರು ಆಯ್ಕೆಯಾಗಿರುತ್ತಾರೆ. ಕಾರ್ಯಕಾರಿ...
ಶತಾಯುಷಿ ನಿವೃತ್ತ ಪೋಸ್ಟ್ ಮಾಸ್ಟರ್ ಅವರ “ಶತ ಸಂಭ್ರಮ”
ಮ೦ಗಳೂರು: ಬಿಕರ್ನಕಟ್ಟೆಯಲ್ಲಿ ವಾಸವಾಗಿರುವ ಶತಾಯುಷಿ ನಿವೃತ್ತ ಪೋಸ್ಟ್ ಮಾಸ್ಟರ್ ರಾಮಣ್ಣ ಶೆಟ್ಟಿಯವರು ನೂರನೇ ವಸಂತಕ್ಕೆ ಕಾಲಿಟ್ಟ ಸಂಭ್ರಮವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.
"ಶತ ಸಂಭ್ರಮ"ದಲ್ಲಿ ಭಾಗಿಯಾಗಿದ ಶಾಸಕ ವೇದವ್ಯಾಸ್ ಕಾಮತ್ ಅವರು, ಬಾಲ್ಯದಲ್ಲಿ ದೂರದ ಊರುಗಳಲ್ಲಿರುವ ನಮ್ಮ ಬಂಧು ಮಿತ್ರರ ಒಂದು ಪತ್ರಕ್ಕಾಗಿ ಅಂಚೆಯಣ್ಣನ ಬರುವಿಕೆಗೆ ಕಾತರದಿಂದ ಕಾಯುತ್ತಿದ್ದೆವು. ಎಲ್ಲರ ಬದುಕಿನಲ್ಲೂ ಇಂತಹ ಅಂಚೆಯಣ್ಣಂದಿರ ಸುಮಧುರ...
ಶಾಲಾ ಕಾಲೇಜುಗಳ ಮುಖ್ಯಸ್ಥರು,ಶಾಲಾ ವಾಹನ ಚಾಲಕರ ಸಭೆ
ಮಂಗಳೂರು: ನಗರದ ಪ್ರಮುಖ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯೋಪಾದ್ಯಾಯರು, ಮುಖ್ಯಸ್ಥರು, ಶಾಲೆಗಳ ಮಕ್ಕಳ ಸುರಕ್ಷತಾ ಸಮಿತಿಯ ಸದಸ್ಯರು ಮತ್ತು ಶಾಲಾ ವಾಹನ ಚಾಲಕರ ಸಭೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಜೂ.7 ರಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಆಗ್ರವಾಲ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.ಶಾಲಾ ವಾಹನಗಳಿಗೆ ಸಂಬಂಧಪಟ್ಟಂತೆ ಕರ್ನಾಟಕ ಮೋಟಾರು...
ದ.ಕನ್ನಡ , ಉಡುಪಿ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿಗಳಾದ ಕ್ಯಾ. ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ...
ಮ೦ಗಳೂರು: ದ.ಕನ್ನಡ ಹಾಗೂ ಉಡುಪಿ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದಾರೆ.ದ.ಕ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ ವಿರುದ್ದ 1, 49,208 ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಕ್ಯಾ. ಬ್ರಿಜೇಶ್ ಚೌಟ...
ನಾಪತ್ತೆಯಾಗಿದ್ದ ಮಹಿಳೆಯನ್ನು ಮತ್ತೆ ಕುಟುಂಬದೊಂದಿಗೆ ಸೇರಿಸಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು
ಮಂಗಳೂರು: ನಾಪತ್ತೆಯಾಗಿದ್ದ ಮಹಿಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬ೦ದಿಯ ಶ್ರಮ ಮತ್ತು ಮುತುವಜಿ೯ಯಿ೦ದ ಮತ್ತೆ ಕುಟುಂಬದೊಂದಿಗೆ ಸೇರಿಕೊ೦ಡ ಘಟನೆ ನಡೆದಿದೆ.ನಗರದ ಕದ್ರಿ ಪ್ರದೇಶದಿಂದ ಆಟೋರಿಕ್ಷಾದಲ್ಲಿ ಬಂದ ಮಹಿಳೆಯೋವ೯ರು ತಾನಾಗಿಯೇ ವಿಮಾನ ನಿಲ್ದಾಣವನ್ನು ತಲುಪಿದ್ದರು. ಈ ಮಧ್ಯೆ ಮಹಿಳೆ ಕಾಣೆಯಾಗಿರುವುದನ್ನು ಮನಗಂಡ ಕುಟುಂಬಸ್ಥರು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ...
ಬಸವಣ್ಣನವರ ತತ್ವಗಳು ಎಲ್ಲರಿಗೂ ಮಾದರಿ: ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್.ಜಿ
ಮಂಗಳೂರು: ಬಸವಣ್ಣ ನವರ ವಚನಗಳು, ತತ್ವಗಳು ಎಲ್ಲರಿಗೂ ಮಾದರಿ. ನಾವೆಲ್ಲರೂ ಅವುಗಳನ್ನು ಅನುಸರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಅವರು ಹೇಳಿದರು.
ಅವರು ಮೇ. 10ರ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ...
ಟಾಗೋರರ ಜನ್ಮದಿನ: ಪುಸ್ತಕ ಪ್ರದರ್ಶನ ಮತ್ತು ವಿಮರ್ಶೆ
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಗ್ರಂಥಾಲಯದಲ್ಲಿ ಆಂಗ್ಲ ಸಂಘ ಹಾಗೂ ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ನೋಬೆಲ್ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ ಟಾಗೋರ್ ಅವರ ಜನ್ಮದಿನದ ಅಂಗವಾಗಿಗ್ರಂಥಾವಲೋಕನ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮದಲ್ಲಿ ರವೀಂದ್ರನಾಥ ಟಾಗೋರ್ ಅವರ ಪುಸ್ತಕಗಳನ್ನು ಪ್ರದರ್ಶನ ಮಾಡಲಾಯಿತು. ಟಾಗೋರ್ ಅವರ ವ್ಯಕ್ತಿತ್ವ ಹಾಗೂ ನೋಬೆಲ್ ಪ್ರಶಸ್ತಿ ಪುರಸ್ಕೃತ ಕೃತಿ ಗೀತಾಂಜಲಿ ಕುರಿತು ದ್ವಿತೀಯ ಬಿಎ...







