ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ
ಮ೦ಗಳೂರು, ಪಿಎ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರ್ತಿಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ಜರಗಿತು.ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ (ಮೌಲ್ಯಮಾಪನ) ಡಾ. ದೇವೇಂದ್ರಪ್ಪ ಹೆಚ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕ್ಯಾಲಿಕಟ್ ಮತ್ತು ಕಣ್ಣೂರು ವಿಶ್ವವಿದ್ಯಾನಿಲಯದ ವಿಶ್ರಾ೦ತ ಕುಲಪತಿ ಡಾ. ಅಬ್ದುಲ್ ರಹಿಮಾನ್ ,ಮ್ಯಾನೇಜಿಂಗ್ ಟ್ರಸ್ಟಿ ಅಬ್ದುಲ್ಲಾ ಇಬ್ರಾಹಿಂ, ಟ್ರಸ್ಟಿ ಅಬ್ದುಲ್ ಲತೀಫ್...
ವಿಶ್ವವಿದ್ಯಾನಿಲಯ ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ
ಮಂಗಳೂರು: 2024-25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ ಕಲಾನಿಕಾಯದ ಕೋರ್ಸುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ಆಗಸ್ಟ್ 12 ಮತ್ತು 13 ರಂದು ರವೀಂದ್ರ ಕಲಾಭವನ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿ ನಡೆಯಲಿದೆ.ವಿಜ್ಞಾನ ನಿಕಾಯ, ವಾಣಿಜ್ಯ ನಿಕಾಯ ಮತ್ತು ಶಿಕ್ಷಣ ನಿಕಾಯದ ಕೋರ್ಸುಗಳ ಅತಿಥಿ...
ವಿಕಲಚೇತನರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು,: ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯನಾಗರಿಕರ ದಿನಾಚರಣೆಯ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವಿಕಲಚೇತನರ ಹಾಗೂ ಸಲ್ಲಿಸುತ್ತಿರುವ ಸಂಸ್ಥೆ/ವ್ಯಕ್ತಿಗಳಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ ಅಥವಾ ಇಲಾಖೆಯ ವೆಬ್‍ಸೈಟ್ www.dwdsc.karnataka.gov.in ಮೂಲಕ ಪಡೆಯಬಹುದು. ಅರ್ಜಿಗಳನ್ನು ...
ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: ಅರ್ಜಿ ಆಹ್ವಾನ
ಮಂಗಳೂರು: 2024-25ನೇ ಸಾಲಿನ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಸಾಲ ಯೋಜನೆ:ಹಿಂದುಳಿದ ವರ್ಗಗಳ ಪ್ರವರ್ಗ-2ಎ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ...
ಯಕ್ಷಗಾನದ ಪರಂಪರೆ ಉಳಿಸುವ ನಿಟ್ಟಿನಲ್ಲಿ ಕಲಾವಿದರ ಸಮಾವೇಶ : ಪ್ರೊ| ಕೆ. ಚಿನ್ನಪ್ಪ ಗೌಡ
ಮ೦ಗಳೂರು: ಯಕ್ಷಗಾನದಲ್ಲಿ ಗಾನ, ನಾಟ್ಯ ವೈಭವವು ಪ್ರಧಾನವಾಗದೇ ಪರಂಪರೆ ಉಳಿಯಬೇಕು. ಈ ನಿಟ್ಟಿನಲ್ಲಿ ಎಲ್ಲ ಮೇಳದ ಕಲಾವಿದರು ಕನಿಷ್ಠ ವರ್ಷಕ್ಕೊಮ್ಮೆಯಾದರೂ ಸಮಾವೇಶ ನಡೆಸಿ, ಯಕ್ಷಗಾನದ ಪರಂಪರೆ ಉಳಿಸುವ ನಿಟ್ಟಿನಲ್ಲಿ ವಿಚಾರ ವಿಮರ್ಶೆ ನಡೆಸಬೇಕು ಎಂದು ಕರ್ನಾಟಕ ಜಾನಪದ ವಿವಿ ವಿಶ್ರಾಂತ ಕುಲಪತಿ ಪ್ರೊ| ಕೆ. ಚಿನ್ನಪ್ಪ ಗೌಡ ಹೇಳಿದರು.ಭ್ರಾಮರಿ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ವತಿಯಿಂದ...
ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿಶಾಸಕ ಕಾಮತ್ ಮನವಿ
ಮ೦ಗಳೂರು: ರಾಜ್ಯದಲ್ಲಿ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್ ಅವರಲ್ಲಿ ಮನವಿ ಮಾಡಿದರು.
ಗಮನ ಸೆಳೆಯುವ ಸೂಚನಾ ಕಲಾಪದ ಸಂದರ್ಭದಲ್ಲಿ ಪ್ರಸ್ತಾವವಾದ ವಿಷಯಕ್ಕೆ ದನಿಗೂಡಿಸಿದ ಶಾಸಕರು, ಕಳೆದ ಒಂದೂವರೆ ವರ್ಷದಲ್ಲಿ ತುಳು ಭಾಷೆಯ ಅಧಿಕೃತ ಮಾನ್ಯತೆ ಬಗ್ಗೆ ಎರಡು ಬಾರಿ ಮನವಿ...
ಆಟೋ ರಿಕ್ಷಾಗಳ ಬಾಡಿಗೆ ಮೀಟರ್: ಸಚಿವರಿಗೆ ಶಾಸಕ ವೇದವ್ಯಾಸ ಕಾಮತ ಮನವಿ
ಮಂಗಳೂರು : ಆಟೋ ರಿಕ್ಷಾಗಳ ಬಾಡಿಗೆ ಮೀಟರ್ ನ ಮುದ್ರೆಯನ್ನು ತೂಕ ಮತ್ತು ಮಾಪನ ಇಲಾಖೆಯ ಅಧಿಕಾರಿಗಳು ಮಂಗಳೂರು ಆರ್.ಟಿ.ಒ ಕಚೇರಿಯಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುವಂತೆ ಶಾಸಕ ವೇದವ್ಯಾಸ ಕಾಮತ್ ಅವರು, ಸಾರಿಗೆ ಮತ್ತು ಮುಜುರಾಯಿ ಇಲಾಖೆಯ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು.
ಸದ್ಯ ಈ ಪ್ರಕ್ರಿಯೆ ನಗರದ ಹೊರ ವಲಯದ ಕುಲಶೇಖರದಲ್ಲಿ ನಡೆಯುತ್ತಿರುವುದರಿಂದ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಪ್ರಯಾಣಿಕರ ಪ್ರಮಾಣ ಶೇ.21ರಷ್ಟು ಏರಿಕೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರಮಾಣ ಶೇ.21ರಷ್ಟು ಏರಿಕೆಯಾಗಿದೆ.
ಅದಾನಿ ಎಂಟರ್ಪ್ರೈಸಸ್ನ ಅಂಗಸಂಸ್ಥೆಯಾದ ಅದಾನಿ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ (ಎಎಹೆಚ್ಎಲ್)ನಿರ್ವಹಿಸುತ್ತಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2024-25ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಐತಿಹಾಸಿಕಮೈಲಿಗಲ್ಲನ್ನು ಸಾಧಿಸಿದೆ. 2023-24ರ ಮೊದಲ ತ್ರೈಮಾಸಿಕದಲ್ಲಿ 457,859 ಪ್ರಯಾಣಿಕರಿಗೆ ಹೋಲಿಸಿದರೆ ವಿಮಾನ ನಿಲ್ದಾಣವು ತನ್ನಟರ್ಮಿನಲ್ಗಳ ಮೂಲಕ 552,689 ಪ್ರಯಾಣಿಕರೊಂದಿಗೆ...
ಜು.28ರಂದು ಕಿನ್ನಿಗೋಳಿಯಲ್ಲಿ “ಮುದುಕನ ಮದುವೆ”ನಾಟಕ
ಮಂಗಳೂರು: ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಜುಲೈ 28ರಂದು ಶ್ರೀ ನಂದಿಕೇಶ್ವರ ನಾಟಕ ಸಂಘದ 40ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 10ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಬಳಿಕ "ಮುದುಕನ ಮದುವೆ" ತುಳು ಕನ್ನಡ ಮಿಶ್ರಿತ ಹಾಸ್ಯ ನಾಟಕದ ಉಚಿತ ಪ್ರದರ್ಶನ ನಡೆಯಲಿದೆ ಎಂದು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಯುಗಪುರುಷ ಪತ್ರಿಕೆ ಸಂಪಾದಕ ಭುವನಾಭಿರಾಮ...
ಕೆನರಾ ವಿಕಾಸ್ ಸಮೂಹ ಸಂಸ್ಥೆ : ವನ ಮಹೋತ್ಸವ
ಮಂಗಳೂರು: ಕೆನರಾ ವಿಕಾಸ್ ಸಮೂಹ ಸಂಸ್ಥೆಗಳ ಆವರಣದಲ್ಲಿ ಜುಲೈ 19ರಂದು ವನಮಹೋತ್ಸವ ಕಾರ್ಯಕ್ರಮವನ್ನು ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು.
ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ, ಕೆನರಾ ಹೈಸ್ಕೂಲ್ ಅಸೋಸಿಯೇಶನ್ ನ ಆಡಳಿತ ಮಂಡಳಿಯ ಸದಸ್ಯರಾದ ಬಸ್ತಿ ಪುರುಷೋತ್ತಮ ಶೆಣೈ ಅವರು ಮಾತನಾಡಿ ಮನುಷ್ಯನ ಜೀವನದಲ್ಲಿ ಗಿಡಮರಗಳ ಪ್ರಾಮುಖ್ಯತೆಯನ್ನು ವಿವರಿಸಿದರು.
ಕೆನರಾ ವಿಕಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ...