ಕೃಷಿ ಬೆಂಬಲ ಬೆಲೆ ಹೆಚ್ಚಿಸಿ : ಪ್ರಧಾನಿಗೆ ಮುಖ್ಯಮಂತ್ರಿ ಗಳ ಪತ್ರ
ಮಂಗಳೂರು: ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಪತ್ರ ನೀಡಿದ್ದಾರೆ. ಮುಖ್ಯಮಂತ್ರಿ ಗಳ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಧಾನಿಗೆ ಮನವಿ ಪತ್ರ ನೀಡಿದರು.ಪ್ರಧಾನಿಗಳ ಮಂಗಳೂರು ಭೇಟಿ ಸಂದರ್ಭದಲ್ಲಿ...
ಬಾಲಕಾರ್ಮಿಕ ರಕ್ಷಣೆಯ ಕಾರ್ಯಾಚರಣೆ: 3 ಕಿಶೋರ ಕಾರ್ಮಿಕರು ಪತ್ತೆ
ಮಂಗಳೂರು: ನಗರದ ಸ್ಟೇಟ್‍ಬ್ಯಾಂಕ್, ಹಂಪನಕಟ್ಟೆ, ಬಂದರ್, ಸೆಂಟ್ರಲ್ ಮಾರ್ಕೆಟ್ ಮುಂತಾದ ಕಡೆ ಸೋಮವಾರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಟಾಸ್ಕ್ ಸಮಿತಿ ಸದಸ್ಯರು, ತಹಶೀಲ್ದಾರರ ನೇತೃತ್ವದಲ್ಲಿ ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಪೊಲೀಸ್ ಇಲಾಖೆ, ರೇಷ್ಮೆ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ...
ಯುವನಿಧಿ ಸ್ವಯಂ ಘೋಷಣೆ – ಕಡ್ಡಾಯ
ಮಂಗಳೂರು, ಅ.30(ಕ.ವಾ):- ಯುವನಿಧಿ ಯೋಜನೆಯಲ್ಲಿ ನೋಂದಾವಣಿಯಾದ ಅಭ್ಯರ್ಥಿಗಳು ಕಡ್ಡಾಯವಾಗಿ https://sevasindhuservices.karnataka.gov.inನಲ್ಲಿ ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂಬುವುದನ್ನು ಪರಿಶೀಲಿಸಿಕೊಂಡು, ಹಾಗೂ ಈಗಾಗಲೇ ನೊಂದಾಯಿಸಿಕೊಂಡು ಹಣ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಸ್ವಯಂ ಘೋಷಣೆಯನ್ನು ಪ್ರತಿ ತ್ರೈಮಾಸಿಕದ ಬದಲಾಗಿ ಮಾಸಿಕವಾಗಿ (ಈ ಮೊದಲಿನಂತೆ) ನವೆಂಬರ್ ತಿಂಗಳಿನಿಂದ ಪ್ರತೀ ತಿಂಗಳಿನ 1 ನೇ ದಿನಾಂಕದಿಂದ 25 ನೇ ದಿನಾಂಕದೊಳಗೆ...
ನ.1ರಂದು ಲೇಡಿಗೋಷನ್ ಆಸ್ಪತ್ರೆಯಲ್ಲಿ ಕಾರುಣ್ಯ ಯೋಜನೆ ಉದ್ಘಾಟನೆ
ಮಂಗಳೂರು: ಮಂಗಳೂರಿನ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಜೊತೆಗಾರರಿಗೆ ರಾತ್ರಿ ಊಟ ನೀಡುವ ಕಾರುಣ್ಯ ಯೋಜನೆಯ ಉದ್ಘಾಟನೆ ನವೆಂಬರ್ 1ರಂದು ಸಂಜೆ 4 ಗಂಟೆಗೆ ಲೇಡಿಗೋಷನ್ ಆಸ್ಪತ್ರೆಯ ಯೋಗಾಭ್ಯಾಸ ಧ್ಯಾನ ಕೇಂದ್ರದಲ್ಲಿ ನಡೆಯಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್...
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ- 2025 ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 8 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗಾಗಿ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿ ಪ್ರಧಾನ...
ಪಟಾಕಿ ಸ್ಟಾಲ್ ಪರವಾನಿಗೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಮಂಗಳೂರು: 2025 ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ/ ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಆಸಕ್ತರು ಅರ್ಜಿಯನ್ನು ಜಿಲ್ಲಾಧಿಕಾರಿಯವರ ಕಛೇರಿಗೆ ಅಕ್ಟೋಬರ್ 10 ರೊಳಗಾಗಿ ಸಲ್ಲಿಸುವಂತೆ ತಿಳಿಸಲಾಗಿದ್ದು, ಪ್ರಸ್ತುತ ಅರ್ಜಿಯೊಂದಿಗೆ ವರದಿಯನ್ನು ಈ ಜಿಲ್ಲಾಧಿಕಾರಿ ಕಛೇರಿಗೆ...
ಸ್ವಚ್ಛತಾ ಕಾರ್ಯಕ್ರಮ
ಮಂಗಳೂರು : ಪರಿಸರ ಸ್ವಚ್ಛವಾಗಿದ್ದರೆ ಊರಿನ ಸುಂದರತೆ ಜತೆಗೆ ಸಾಂಕ್ರಾಮಿಕ ರೋಗಗಳು ದೂರವಾಗಿ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ. ಹಾಗಾಗಿ ಸ್ವಚ್ಛತೆ ಕಾಪಾಡಲು ಸಹಕರಿಸುವುದು ನಾಗರಿಕರ ಜವಾಬ್ದಾರಿಯಾಗಿದೆ ಎಂದು ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್, ರೋಶನಿ ನಿಲಯ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು...
ಆಯುರ್ವೇದ ವಿಶ್ವಕ್ಕೆ ಭಾರತದ ಕೊಡುಗೆ: ಸ್ಪೀಕರ್ ಯು.ಟಿ.ಖಾದರ್
ಮಂಗಳೂರು: ಪಾರಂಪರಿಕ ವೈದ್ಯ ಪದ್ಧತಿಯಾಗಿರುವ ಆಯುರ್ವೇದ ವಿಶ್ವಕ್ಕೆ ಭಾರತೀಯರ ದೊಡ್ಡ ಕೊಡುಗೆಯಾಗಿದ್ದು, ಈ ಪದ್ಧತಿಯನ್ನು ಉಳಿಸಬೇಕಾದ ಜವಾಬ್ದಾರಿ ಆಯುರ್ವೇದ ಪದ್ಧತಿ ಕಲಿಯುವ ವಿದ್ಯಾರ್ಥಿಗಳದ್ದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.ನಗರದ ವೆನ್ಲಾಕ್ ಆಸ್ಪತ್ರೆ ಆವರಣದ ಆಯುಷ್ ಆಸ್ಪತ್ರೆಯಲ್ಲಿ ಮಂಗಳವಾರ ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಆಶ್ರಯದಲ್ಲಿ ಆಯುಷ್ ಮಹಾ ವಿದ್ಯಾಲಯಗಳ...
ದಸರಾ ಹಬ್ಬಕ್ಕೆ ಯಶವಂತಪುರ–ಮಡಗಾಂವ್–ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು
ಮ೦ಗಳೂರು: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ರೈಲು ಸಂಖ್ಯೆ 06249/06250 ಯಶವಂತಪುರ–ಮಡಗಾಂವ್–ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಒಂದು ಟ್ರಿಪ್ ಓಡಿಸಲಿದೆ.ರೈಲು ಸಂಖ್ಯೆ 06249 ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 30 ರಂದು ಮಧ್ಯಾಹ್ನ 12:00 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 5:30 ಗಂಟೆಗೆ ಮಡಗಾಂವ್...
ಬಾಡಿಗೆ ಮನೆಯಲ್ಲಿ ಆಕ್ರಮ ಮದ್ಯ ತಯಾರಿ : ಇಬ್ಬರ ಬ೦ಧನ
ಮ೦ಗಳೂರು: ಉಳ್ಳಾಲ ತಾಲೂಕು ಪಜೀರು ಗ್ರಾಮದ ಕಂಬಳಪದವು ಪ್ರದೇಶದಲ್ಲಿ ಅಕ್ರಮ ಮದ್ಯ ತಯಾರಿಸುತ್ತಿದ್ದ ಮನೆಯೊ೦ದಕ್ಕೆ ದಾಳಿ ನಡೆಸಿರುವ ಪೊಲೀಸರು ಇಬ್ಬರನ್ನು ಬ೦ಧಿಸಿದ್ದಾರೆ. ಸ್ಥಳದಿ೦ದ ಅಕ್ರಮ ಮದ್ಯ ಮತ್ತು ತಯಾರಿಕಾ ಯಂತ್ರೋಪಕರಣಗಳು, ಮದ್ಯ ಬಾಟ್ಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಣವ್ ಪಿ. ಶೆಣೈ (24) ಹಾಗೂ ಅನೂಷ್ ಆರ್. (24) ಬ೦ಧಿತ ಆರೋಪಿಗಳು.
ಬಾಡಿಗೆ ಮನೆ ಅಕ್ರಮ ತಯಾರಿ ನಡೆಯುತ್ತಿರುವ...



