24 C
Karnataka
Friday, November 15, 2024

ದರೋಡೆಕೋರ ಚೆಡ್ಡಿ ಗ್ಯಾಂಗ್ ಬ೦ಧನ; ಪೊಲೀಸರಿ೦ದ ಮಿಂಚಿನ ಕಾರ್ಯಾಚರಣೆ

ಮಂಗಳೂರು : ಮ೦ಗಳೂರಿನಲ್ಲಿ ದರೋಡೆ ನಡೆಸಿ ಆತ೦ಕ ಸೃಷ್ಟಿಸಿದ್ದ ಚೆಡ್ಡಿ ಗ್ಯಾಂಗ್ ಅನ್ನು ಮ೦ಗಳೂರು ಪೊಲೀಸರು ಕ್ಷಿಪ್ರ ಕಾಯಾ೯ಚರಣೆ ನಡೆಸಿ ಬ೦ಧಿಸಿದ್ದಾರೆ.
ರಾಜು ಸಿಂಗ್ವಾನಿಯ (24 ವರ್ಷ), , ವಾಸ: ವಿಶ್ವನಗರ, ಧನ್ಯವಾದ್ ಪಿ.ಎಸ್, ರಗೋಗರ್ ತಾಲೂಕು, ಗುಣಾ ಜಿಲ್ಲೆ, ಮಧ್ಯ ಪ್ರದೇಶ,ಮಯೂರ್ (30 ವರ್ಷ), ಗುಲಾಬ್ಗಂಜ್, ಭೂಪಾಲ್, ಮಧ್ಯಪ್ರದೇಶ.,ಬಾಲಿ (22 ವರ್ಷ), , ವಾಸ: ಮಾಧವ್ಗಡ್, ಆಶೋಕನಗರ, ಮಧ್ಯ ಪ್ರದೇಶವಿಕ್ಕಿ (21 ವರ್ಷ), ಜಗನ್ಪುರ್ ಚಾಕ್, ಕೋತ್ವಾಲಿ ಪಿ.ಎಸ್, ಗುಣಾ ಜಿಲ್ಲೆ, ಮಧ್ಯ ಪ್ರದೇಶ ಬ೦ಧಿತ ಆರೋಪಿಗಳು.ಪೊಲೀಸರು ಈ ಮಿಂಚಿನ ಕಾರ್ಯಾಚರಣೆಯನ್ನು ಕೃತ್ಯ ನಡೆದ ಕೇವಲ 5 ಗಂಟೆ ಗಳ ಒಳಗೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮ೦ಗಳವಾರ ಸುಮಾರು 4ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿ ವಿಕ್ಟರ್ ಮೆಂಡೋನ್ಸಾ ಅವರಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ ತೀವ್ರವಾಗಿ ಗಾಯಗೊಳಿಸಿದ್ದರು.
ಅವರ ಪತ್ನಿ ಪ್ಯಾಟ್ರಿಸಿಯಾ ಮೆಂಡೋನ್ಸ ರವರಿಗೆ ಕೂಡಾ ಸ್ಕ್ರೂ ಡ್ರೈವರ್ ನಿಂದ ಹೊಡೆದು ಬೊಬ್ಬೆ ಹಾಕದಂತೆ ಹಾಗೂ ಫೋನ್ ಮಾಡದಂತೆ ಬೆದರಿಸಿ ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಜಖಂಗೊಳಿಸಿ ಕಪಾಟಿನ ಲಾಕರ್ ಒಳಗೆ ಇರಿಸಿದ್ದ ಸುಮಾರು 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ಮತ್ತು ರೂ 1 ಲಕ್ಷ ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, ರೂ 3೦೦೦/- ನಗದು ಹಣವನ್ನು ಸುಲಿಗೆ ಮಾಡಿ, ಸದ್ರಿ ಮನೆಯ ವೆರಾಂಡದಲ್ಲಿದ್ದ ಕಾರಿನ ಸಮೇತ ಪರಾರಿಯಾಗಿದ್ದರು. ಪ್ಯಾಟ್ರ್ರಿಸಿಯಾ ಮೆಂಡೊನ್ಸಾ ರವರು ನೀಡಿದ ದೂರಿನಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಬೆಳಗ್ಗೆ 7 ಗಂಟೆಗೆ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣ ನಡೆದ ಮಾಹಿತಿ ಬಂದ ಕೂಡಲೇ ಉರ್ವಾ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯವರು ತಕ್ಷಣ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದ ಮಾಹಿತಿಯನ್ನು ನಗರ ನಿಸ್ತಂತು ಕೊಠಡಿಗೆ ನೀಡಿದ್ದು, ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಸದರಿ ಕಾರನ್ನು ಪತ್ತೆಮಾಡಿ ವಶಕ್ಕೆ ಪಡೆದು ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದರು.
ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ಗುಮಾನಿ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು.

ಕೆ.ಎಸ್.ಅರ್.ಟಿ.ಸಿ ಅಧಿಕಾರಿಗಳನ್ನು ಸಂಪರ್ಕಿಸಿ, ಬೆಳಗಿನ ಜಾವ ಮುಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಅರ್.ಟಿ.ಸಿ ಬಸ್ಸುಗಳ ಮಾಹಿತಿ ಪಡೆಯಲಾಗಿ ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದ ಒಂದು ಕೆ.ಎಸ್.ಅರ್.ಟಿ.ಸಿ ಬಸ್ಸಿನ ನಿರ್ವಾಹಕರು ಅವರ ಬಸ್ಸಿನಲ್ಲಿ ಮುಲ್ಕಿಯಿಂದ 4 ಜನರು ಒಟ್ಟಿಗೆ ಪ್ರಯಾಣಿಸಿದ ಮಾಹಿತಿ ತಿಳಿಸಿದರು. ವ್ಯಕ್ತಿಗಳು ಅವರಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಬಗ್ಗೆ ತಿಳಿಸಿದ್ದು, ಅವರ ಮಾಹಿತಿಯಂತೆ ಸದರಿ ಸಮಯ ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ಬಗ್ಗೆ ವಿವರ ಪಡೆದುಕೊ೦ಡರು. ಬಸ್ಸು ನಿರ್ವಾಹಕರನ್ನು ಸಂಪರ್ಕಿಸಿ ಅವರು ತಿಳಿಸಿದ ಮಾಹಿತಿಯಂತೆ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಿದರು.
ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಈ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ 4 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.
ಅವರುಗಳು ಕೃತ್ಯವೆಸಗಿದ ಬಗ್ಗೆ ಒಪ್ಪಿದ್ದು, ಅವರ ವಶದಲ್ಲಿದ್ದ ಮಂಗಳೂರು ನಗರದಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಗಳು ಹಾಗೂ ಹಣವನ್ನು ಅಮಾನತ್ತು ಪಡಿಸಿ ಉರ್ವಾ ಪೊಲೀಸ್ ಅಧಿಕಾರಿಗಳಿಗೆ ವಶಕ್ಕೆ ನೀಡಿರುತ್ತಾರೆ.

ಈ ಕಾರ್ಯಾಚರಣೆಯನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತಅನುಪಮ್ ಅಗ್ರವಾಲ್ ಅವರ ಮಾರ್ಗದರ್ಶನದಂತೆ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್ ಹಾಗೂ ಬಿ.ಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ, ಮಂಗಳೂರು ಕೇಂದ್ರ ವಿಭಾಗದ ಎಸಿಪಿ ಪ್ರತಾಪ್ ಸಿಂಗ್ ತೋರಟ್, ಉರ್ವಾ ಠಾಣೆಯ ನಿರೀಕ್ಷಕಿ ಭಾರತೀ ಜಿ. ಅವರನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆಯ ಎಸ್.ಐ ಹರೀಶ ಹೆಚ್.ವಿ , ಅನಿತಾ ಹೆಚ್.ಬಿ, ಎ.ಎಸ್.ಐ ವಿನಯ್ ಕುಮಾರ್, ವೇಣುಗೋಪಾಲ್ ಸಿಬ್ಬಂದಿಗಳಾದ ಪುಷ್ಪರಾಜ್, ಪ್ರಮೋದ್, ನಾರಾಯಣ, ಸತೀಶ್, ಪೀಟರ್, ರಾಮಚಂದ್ರ ವೆಂಕಟೇಶ್, ಅಭಿಷೇಕ್, ಪ್ರಜ್ವಲ್ ರವರು ನಡೆಸಿರುತ್ತಾರೆ. ಈ ಶೀಘ್ರ ಪತ್ತೆ ಕಾರ್ಯಕ್ಕೆ ಹಾಸನ ಜಿಲ್ಲೆಯ ಪೊಲೀಸ್ ಅಧೀಕ್ಷಕಿ ಮಹಮ್ಮದ್ ಸುಜೀತಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ತಮ್ಮಯ್ಯ ಎಮ್ .ಕೆ , ಸಕಲೇಶಪುರ ಉಪ ವಿಭಾಗದ ಡಿವೈಎಸ್ಪಿ ಪ್ರಮೋದ್ ಬಿ., ಸಕಲೇಶಪುರ ನಗರ ಪಿ.ಎಸ್.ಐ ಪ್ರಮೋದ್ ಕೆ.ಎಸ್ ಮತ್ತು ಗ್ರಾಮಾಂತರ ಠಾಣೆಯ ಪಿ.ಎಸ್.ಐ ಸದಾಶಿವ ತಿಪ್ಪರೆಡ್ಡಿ, ಸಿಬ್ಬಂದಿಗಳಾದ ಖಾದರ್ ಆಲಿ, ಸುನಿಲ್, ಜಗದೀಶ್, ಯೋಗಿಶ್, ಮೂಲ್ಕಿ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀ ವಿನಾಯಕ್ ಬಾವಿಕಟ್ಟೆ, ಸಿಬ್ಬಂದಿಗಳಾದ ಹರೀಶೇಖರ್ ಎ.ಎಸ್.ಐ ಕಿಶೋರ್ ಕೋಟ್ಯಾನ್ , ಚಂದ್ರಶೇಖರ್ ಹಾಗೂ ಶಶಿಧರ್ರವರು ಸಹಕರಿಸಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles