16.7 C
Karnataka
Saturday, November 23, 2024

ಸರಗಳ್ಳತನ ಪ್ರಕರಣದ ಕುಖ್ಯಾತ ಆರೋಪಿಯ ಸೆರೆ

ಮಂಗಳೂರು: ಸರಗಳ್ಳತನ ಪ್ರಕರಣದ ಕುಖ್ಯಾತ ಆರೋಪಿಯನ್ನು ಬ೦ಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು, ಆರೋಪಿಯಿಂದ ಒಟ್ಟು 2,41,000ರೂ. ಮೌಲ್ಯದ ಸ್ವತ್ತು ವಶಕ್ಕೆ ಪಡೆದುಕೊ೦ಡಿದ್ದಾರೆ.ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಭದ್ರಾಪುರ ಎಜ್ಜಲದ ಚಂದ್ರಶೇಖರ @ ಡಾರ್ಲಿಂಗ್ ಚಂದ್ರ, (29 ) ಬ೦ಧಿತ ಆರೋಪಿ.
ಆ.21ರ೦ದು ಬಿಜೈ ಯಲ್ಲಿ ಬೆಳಗಿನ ಜಾವ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದಾಗ ಇಬ್ಬರು ಅಪರಿಚಿತ ಯುವಕರು ಬೈಕ್ ನಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಸುಲಿಗೆ ಮಾಡಿದ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಪತ್ತೆಯ ಬಗ್ಗೆ ಮಂಗಳೂರು ಸಿಸಿಬಿ ಘಟಕದಿಂದ ವಿಶೇಷ ತಂಡವನ್ನು ರಚಿಸಲಾಗಿತ್ತು. ವಿಶೇಷ ತಂಡ ಕಾಯಾ೯ಚರಣೆ ನಡೆಸಿ ನ.4 ರ೦ದು ಆರೋಪಿಯನ್ನು ಬ೦ಧಿಸಿದ್ದಾರೆ. ಆರೋಪಿ ಸುಲಿಗೆ ಮಾಡಿದ್ದ 21.300 ಗ್ರಾಂ ತೂಕದ ತುಂಡಾದ ಚಿನ್ನದ ಕರಿಮಣಿ ಸರವನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಮೋಟಾರ್ ಸೈಕಲ್ , ಮೊಬೈಲ್ ಫೋನ್ ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,41,000/- ರೂ ಆಗಬಹುದು ಎ೦ದು ಅ೦ದಾಜಿಸಲಾಗಿದೆ.
ಆರೋಪಿಯ ಮೇಲೆ ರಾಮ ನಗರ ಜಿಲ್ಲೆಯ ಹಾರೋಹಳ್ಳಿ ಪೊಲೀಸ್ ಠಾಣೆ, ಕುಂಬ್ಳಗೋಡು, ಬಿಡದಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆ ಹಾಗೂ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಸುಲಿಗೆ, ಕೊಲೆ, ಕೊಲೆಯತ್ನ ಹಾಗೂ ಹಲ್ಲೆ ಪ್ರಕರಣಗಳು ದಾಖಲಾಗಿರುತ್ತವೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles