24.1 C
Karnataka
Wednesday, December 4, 2024

ತೀವ್ರ ಮಳೆ ಸಾಧ್ಯತೆ: ಶಾಲೆಗಳಿಗೆ ರಜೆ

ಮಂಗಳೂರು: ಫೆಂಗಲ್‌ ಚಂಡಮಾರುತದಿ೦ದಾಗಿ ತೀವ್ರ ಮಳೆಯ ಹಿನ್ನಲೆಯಲ್ಲಿ ಮುಂಜ್ರಾಗತ ಕ್ರಮವಾಗಿ ಡಿಸೆಂಬರ್ 3 ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಅಂಗನವಾಡಿ, ಪ್ರಾಥಮಿಕ ,ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಫೆಂಗಲ್‌ ಚಂಡಮಾರುತದ ಪರಿಣಾಮ ತೀವ್ರ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ದ.ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಹಾಗೂ ಎಲ್ಲಾ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸೂಚಿಸಿದ್ದಾರೆ

ಮಳೆಗಾಲದಲ್ಲಿ ಅನುಸರಿಸುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಷ್ಠಾನಕ್ಕೆ ತರಲು ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಕ್ಷಣದಿಂದಲೇ ಸಿದ್ದರಾಗಬೇಕು. ಆಯಾ ತಹಶೀಲ್ದಾರರು ಈ ಬಗ್ಗೆ ಮೇಲ್ವಿಚಾರಣೆ ವಹಿಸಬೇಕು.ಈ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ತಕ್ಷಣವೇ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಸೂಚನೆ
ಹವಾಮಾನ ಮುನ್ಸೂಚನೆಯಂತೆ ಡಿಸೆಂಬರ್ 6ರವರೆಗೆ ಅರಬಿ ಸಮುದ್ರವು ಪ್ರಕ್ಷುಬ್ದವಾಗಿರುವ ಕಾರಣ ಅನಾಹುತ ತಡೆಯುವ ಸಲುವಾಗಿ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆವಹಿಸಲು ಮೀನುಗಾರಿಕಾ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles