17.9 C
Karnataka
Saturday, November 23, 2024

ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ: ಘನ ವಾಹನಗಳ ಸಂಚಾರದಲ್ಲಿ ಬದಲಾವಣೆ

ಮಂಗಳೂರು : ನಗರದ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಫೆ. 174 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ
ರಾಜ್ಯ ಮಟ್ಟದ ಸಮಾವೇಶ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 73 ರ ರಸ್ತೆಯಲ್ಲಿಸಂಚರಿಸುವ ಘನ ವಾಹನಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಹಾಗೂ ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರ ವಾಹನಗಳನ್ನು ನಿಲ್ಲಿಸಲು ಸ್ಥಳಗಳನ್ನು ನಿಗದಿ ಪಡಿಸಲಾಗಿದೆ.
ಘನ ವಾಹನಗಳ ಸಂಚಾರದಲ್ಲಿ ಬದಲಾವಣೆ:-

  1. ಉಡುಪಿ ಕಡೆಯಿಂದ ಮಂಗಳೂರು ನಗರದ ಮೂಲಕ ಬಿ.ಸಿ.ರೋಡ್ / ಬೆಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ನಂತೂರು-
    ಪಂಪ್‌ ವೆಲ್-ತೊಕ್ಕೊಟ್ಟು-ಮುಡಿಪು-ಮೆಲ್ಕಾರ್ ಮೂಲಕ ಸಂಚರಿಸುವುದು.
  2. ಬೆಂಗಳೂರು / ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ಮೆಲ್ಲಾರ್- ಮುಡಿಪು-ತೊಕ್ಕೊಟ್ಟು-ಪಂಪ್‌
    ವೆಲ್ ಮೂಲಕ ಸಂಚರಿಸುವುದು. ಈ ತಾತ್ಕಾಲಿಕ ಸಂಚಾರ ಮಾರ್ಪಾಡು ದಿನಾಂಕ: 17-02-2024 ರಂದು ಬೆಳಗ್ಗೆ 09.00 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಊರ್ಜಿತದಲ್ಲಿರುತ್ತದೆ.

ಕಾರ್ಯಕ್ರಮಕ್ಕೆ ಆಗಮಿಸುವವರ ವಾಹನ ಪಾರ್ಕಿಂಗ್ ಸ್ಥಳಗಳ ವಿವರ:-
1) ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಗಣ್ಯರ ಕಾರುಗಳು ಹಾಗೂ ಸಾರ್ವಜನಿಕರ ಮೋಟಾರು ಸೈಕಲ್‌ಗಳನ್ನು ಕಾಮತ್
ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು.
2) ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರ ಕಾರುಗಳನ್ನು ಅಡ್ಯಾರ್‌ನ ಕರ್ಮಾರ್ ಮೈದಾನದಲ್ಲಿ ಪಾರ್ಕಿಂಗ್
ಮಾಡುವುದು.
3) ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್ಸುಗಳು ಕಾರ್ಯಕರ್ತರನ್ನು ಕಾಮತ್ ಪಾರ್ಕಿಂಗ್ ಬಳಿ ಇಳಿಸಿ ಅಲ್ಲಿಂದ ಮುಂದುವರಿದು
ಬಸ್ಸನ್ನು ಕಣ್ಣೂರಿನಲ್ಲಿ ಯೂ ಟರ್ನ್ ಮಾಡಿ ಮೋತಿಶ್ಯಾಮ್/ಷಾ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು.
4) ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಗಣ್ಯರ ಕಾರುಗಳನ್ನು ಅಡ್ಯಾರ್ ಗಾರ್ಡನ್ ನಲ್ಲಿ ಪಾರ್ಕಿಂಗ್ ಮಾಡುವುದು.
5) ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್ಸುಗಳ ಚಾಲಕರು ಕಾರ್ಯಕರ್ತರನ್ನು ಅಡ್ಯಾರ್ ಗಾರ್ಡನ್ ಮುಂಭಾಗ ಇಳಿಸಿ
ಸೋಮನಾಥಕಟ್ಟೆಯಲ್ಲಿ ಯೂ ಟರ್ನ್ ಮಾಡಿ ಕಣ್ಣೂರು ಮಸೀದಿ ಬಳಿ ಇರುವ ಷಾ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು.
6) ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಮೋಟಾರ್ ಸೈಕಲ್‌ಗಳನ್ನು ಅಡ್ಯಾರ್ ಗಾರ್ಡನ್ ಮೈದಾನದಲ್ಲಿ ಪಾರ್ಕಿಂಗ್
ಮಾಡುವುದು.
7) ಅಡ್ಯಾರ್ ಕಟ್ಟೆಯಲ್ಲಿರುವ ಜಯಶೀಲ ರವರ ಮೈದಾನದಲ್ಲಿ ಕೂಡಾ ಪಾರ್ಕಿಂಗ್ ಮಾಡಲು ಅವಕಾಶ ಮಾಡಿಕೊಡಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles