ಮ೦ಗಳೂರು: ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ ಮನೆಗೆ ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳಿಯ ಕೊಳ್ನಾಡು ನಿವಾಸಿ ಸಿರಾಜುದ್ದೀನ್ (37) ಬಂಟ್ವಾಳ ನಿವಾಸಿ ಮೊಹಮ್ಮದ್ ಇಕ್ಬಾಲ್ (38) ಮಂಗಳೂರು ಪಡೀಲ್ ನಿವಾಸಿ ಮೊಹಮ್ಮದ್ ಅನ್ಸಾರ್ (27) ಕೇರಳದ ಶಫೀರ್ ಬಾಬು (48) ಬ೦ಧಿತ ಆರೋಪಿಗಳು.

ಜನವರಿ 3ರಂದು ರಾತ್ರಿ, ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶದಲ್ಲಿ ಉದ್ಯಮಿಯೊಬ್ಬರ ಮನೆಗೆ ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖಾ ತಂಡವು ಈಗಾಗಲೇ ಕೇರಳ ಕೊಲ್ಲಂ

ನಿವಾಸಿಗಳಾದ ಅನಿಲ್ ಫರ್ನಾಂಡಿಸ್ (49), ಸಚ್ಚಿನ್ ಟಿ ಎಸ್ (29) ಹಾಗೂ ಶಬಿನ್ ಎಸ್ (27) ಎಂಬವರುಗಳನ್ನು ಬಂಧಿಸಿದ್ದು, ಅವರುಗಳು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುತ್ತಾರೆ.

ತನಿಖೆ ಮುಂದುವರಿಸಲಾಗಿ ಕೃತ್ಯಕ್ಕೆ ಮನೆಯ ಮಾಹಿತಿ ನೀಡಿದ್ದ ಸ್ಥಳಿಯ ಆರೋಪಿ ಕೊಳ್ನಾಡು ನಿವಾಸಿ ಸಿರಾಜುದ್ದೀನ್ ಎಂಬಾತನನ್ನು ಫೆ. 15 ರಂದು ಬಂಧಿಸಿ ವಿಚಾರಣೆ ನಡೆಸಲಾಯಿತು. ಆತ ನೀಡಿದ ಮಾಹಿತಿಯ ಅಧಾರದಲ್ಲಿ ಬಂಟ್ವಾಳ ನಿವಾಸಿ ಮೊಹಮ್ಮದ್ ಇಕ್ಬಾಲ್

ಹಾಗೂ ಮಂಗಳೂರು ಪಡೀಲ್ ನಿವಾಸಿ ಮೊಹಮ್ಮದ್ ಅನ್ಸಾರ್ ಎಂಬವರನ್ನು ಬ೦ಧಿಸಲಾಯಿತು. ಸದ್ರಿ ಪ್ರಕರಣದ ತನಿಖೆ ಮುಂದುವರಿದಂತೆ, ದರೋಡೆ ಕೃತ್ಯಕ್ಕೆ ಮೂಲ ಸೂತ್ರದಾರನಾದ ಕೇರಳದ ಶಫೀರ್ ಬಾಬು (48) ಎಂಬಾತನನ್ನು ಬಂಧಿಸಲಾಯಿತು. ಈತನು ಕೇರಳ ರಾಜ್ಯದ ತ್ರಿಶೂರು ಜಿಲ್ಲೆಯ ಕೊಡಂಗಲ್ಲೂರು ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕನಾಗಿರುವುದಾಗಿದೆ.
ಸದ್ರಿ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್ ಅವರ ಮಾರ್ಗದರ್ಶನದಲ್ಲಿ, ಜಿಲ್ಲಾ ವ್ಯಾಪ್ತಿಯ ಠಾಣೆಗಳಿಂದ ಅಪರಾಧ ಕೃತ್ಯಗಳ ತನಿಖೆಯಲ್ಲಿ ಪರಿಣಿತರಾದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ತಂಡಗಳು ಕಾರ್ಯಾಚರಣೆ ನಡೆಸಿರುತ್ತದೆ.
cheating Rs 30 lakh : Four more accused arrested
