ಮಂಗಳೂರು : ಬೆಂಗಳೂರು ರಾಜ್ಯ ಬಾಲ ಭವನ ಸೊಸೈಟಿ, ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ‘ಮಕ್ಕಳ ಸ್ಪರ್ಧಾ ಕಾರ್ಯಕ್ರಮ – 2025ʼ ಡಾ| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಸಲಾಯಿತು.
ವಿವಿಧ ಸ್ಪರ್ಧೆಗಳಾದ ಸೃಜನಾತ್ಮಕ ಪ್ರದರ್ಶನ ಕಲೆ, ಭರತನಾಟ್ಯ, ಹುಲಿಕುಣಿತ, ಸುಗಮ ಸಂಗೀತ ಹಾಗೂ ವಾದ್ಯ ಸಂಗೀತ ಸ್ಪರ್ಧೆಯನ್ನು ಏಕಕಾಲದಲ್ಲಿ ವಿವಿಧ ಕೊಠಡಿಗಳಲ್ಲಿ ಆಯೋಜಿಸಲಾಯಿತು. ನಿಗದಿಪಡಿಸಿದ ಸ್ಪರ್ಧೆಗಳಲ್ಲಿ ಒಟ್ಟು 170 ಮಕ್ಕಳು ಭಾಗವಹಿಸಿದ್ದರು.
ಕಾರ್ಯಕ್ರಮದ ಉದ್ಘಾಟನೆಯನ್ನು ತೆಂಗಿನ ಹೊಂಬಾಳೆಯನ್ನು ಅರಳಿಸುವುದರ ಮೂಲಕ ಸ್ಪೀಕರ್ ಯು.ಟಿ. ಖಾದರ್ ಫರೀದ್ ಅವರು ನೆರವೇರಿಸಿ ಮಾತನಾಡಿದರು. ಮೊಬೈಲ್ ಬಳಕೆಯ ಗೀಳಿನಿಂದ ಮಕ್ಕಳು ಹೊರಬರಲು ಇಂತಹ ಸ್ಪರ್ಧೆಗಳು ಬಹಳ ಅವಶ್ಯಕ. ಬಾಲ ಭವನವು ಇಂತಹ ಕಾರ್ಯಕ್ರಮಗಳನ್ನು ಇನ್ನಷ್ಟು ಆಯೋಜಿಸಬೇಕಿದೆ ಎಚಿದು ಅವರು ಹೇಳಿದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಅವರಲ್ಲಿ ಹುದುಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಇಂತಹ ವೇದಿಕೆಗಳು ಅತ್ಯಗತ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರಾದ ಮಮತ ಡಿ.ಎಸ್ ಗಟ್ಟಿ, ನಾರು ಅಭಿವೃದ್ಧಿ ನಿಗಮದ ನಟರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಮತ್ತಿತರರು ಉಪಸ್ಥಿತರಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ ವಂದಿಸಿದರು. ಚಂದ್ರಿಕಾ ನಿರೂಪಿಸಿದರು.
ವಿಜೇತರಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಣೆ ಮಾಡಲಾಯಿತು. ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಅಭಿನಂದನಾ ಪತ್ರ ಹಾಗೂ ಪೆÇ್ರೀತ್ಸಾಹಕ ಬಹುಮಾನ ವಿತರಿಸಲಾಯಿತು.
