23.1 C
Karnataka
Saturday, November 23, 2024

ಮಾದಕ ವಸ್ತು ಕೋಕೆನ್ ಪತ್ತೆ ;ಇಬ್ಬರು ಆರೋಪಿಗಳ ಸೆರೆ

ಮಂಗಳೂರು: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತು ಕೋಕೇನ್ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಮಂಗಳೂರು ಅಂಬ್ಲ ಮೊಗರು ಸಣ್ಣಮದಕದ ಸದಕತ್.ಯು @ ಶಾನ್ ನವಾಜ್(31) ಹಾಗೂ ಅಂಬ್ಲ ಮೊಗರು ಮದಕದ ಮಹಮ್ಮದ್ ಅಶ್ಫಕ್ @ ಅಶ್ಫಾ(25) ಬ೦ಧಿತ ಆರೋಪಿಗಳು.

ಮಂಗಳೂರು ನಗರಕ್ಕೆ ಗೋವಾ ರಾಜ್ಯದಿಂದ ಕೋಕೆನ್ ಖರೀದಿಸಿಕೊಂಡು ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಕೋಕೆನ್ ನ್ನು ಮಾರಾಟ/ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಅವರ ವಶದಲ್ಲಿದ್ದ ಹೊಂಡಾ ಅಕ್ಟಿವಾ ಸ್ಕೂಟರ್ ಸ್ವಾಧೀನಪಡಿಸಿಕೊಂಡು ಅದರಲ್ಲಿ ಸಾಗಾಟ ಮಾಡುತ್ತಿದ್ದ 2,72,000 ರೂ ಮೌಲ್ಯದ 35 ಗ್ರಾಂ ನಿಷೇಧಿತ ಕೋಕೆನ್, 3 ಮೊಬೈಲ್ ಫೋನ್ ಗಳನ್ನು, ಡಿಜಿಟಲ್ ತೂಕ ಮಾಪಕ, ನಗದು 5560 ರೂ. ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 4,00,000 ಆಗಿರುತ್ತದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

 ಆರೋಪಿಗಳಿಬ್ಬರೂ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಗೋವಾ ರಾಜ್ಯದಿಂದ ಕೋಕೆನ್ ನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ  ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು  ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.  ಆರೋಪಿಗಳ ಪೈಕಿ ಸದಕತ್.ಯು @ ಶಾನ್ ನವಾಜ್ ಎಂಬಾತನ ವಿರುದ್ದ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ಹಾಗೂ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ. 

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles