ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ಒಂದು ಸ್ಥಾನವನ್ನು ಭರ್ತಿ ಮಾಡಲು ಉಪಚುನಾವಣೆ ನಡೆಸಲು É ಗುರುವಾರ ಅಧಿಸೂಚನೆ ಹೊರಡಿಸಲಾಗಿದೆ
ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಅಧಿಸೂಚನೆ ಹೊರಡಿಸಿದರು. ನಾಮಪತ್ರಗಳ ಸಲ್ಲಿಕೆ ಗುರುವಾರದಿಂದಲೇ ಆರಂಭವಾಗಿದ್ದು, ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆ ಆಗಿರುವುದಿಲ್ಲ. ಅಕ್ಟೋಬರ್ 3 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.