17.9 C
Karnataka
Saturday, November 23, 2024

ದೀಪಾವಳಿ : ಹಸಿರು ಪಟಾಕಿ ಬಳಸಲು ಸೂಚನೆ

ಮಂಗಳೂರು:ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕರ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿರುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದ್ದು ದಿನದ ಯಾವುದೇ ಸಮಯದಲ್ಲಿ ನಿಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳಾದ ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳ ಸುತ್ತಮುತ್ತಲಲ್ಲಿ ಯಾವುದೇ ರೀತಿಯ ಶಬ್ದ ಉಂಟು ಮಾಡುವ ನಿಷೇಧಿತ ಪಟಾಕಿ ಸಿಡಿಮದ್ದುಗಳನ್ನು ಬಳಸಬಾರದು. ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಲು ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿರುತ್ತದೆ.
ನಗರ ಮತ್ತು ಪಟ್ಟಣದ ಚಿಕ್ಕ ಬೀದಿಗಳಲ್ಲಿ ಪಟಾಕಿ ಮತ್ತು ಸಿಡಿಮದ್ದುಗಳನ್ನು ಬಾಣ, ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿ ಉಂಟಾಗುವ, ಬೆಂಕಿ ಅಥವಾ ಸ್ಪೋಟದಿಂದ ಅಪಾಯಳಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿ ಹಾಗೂ ಸಿಡಿಮದ್ದುಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಸಿಡಿಸಲು ವಿನಂತಿಸಲಾಗಿದೆ ಅಲ್ಲದೆ ದೀಪಾವಳಿ ಹಬ್ಬವನ್ನು ಸಿಡಿಮದ್ದು ಪಟಾಕಿಗಳನ್ನು ಉಪಯೋಗಿಸದೆ ದೀಪದ ಹಬ್ಬವನ್ನಾಗಿ ಆಚರಿಸಲು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles