ಉಪ್ಪಿನ೦ಗಡಿ: ಮಹಿಳಾ ಸಹಕಾರಿ ಸಂಘದಲ್ಲಿ ನಕಲಿ ಬಳೆಗಳನ್ನು ಅಡಮಾನವಿರಿಸಿ ಸಾಲಪಡೆದು ವ೦ಚಿಸಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ನೆಲ್ಯಾಡಿ ಗ್ರಾಮದ ನಿವಾಸಿ ಸೆಭಾಸ್ಟಿಯನ್ ಮತ್ತು ಡಾನಿಶ್ ಎಂಬವರು ಮೇಲ್ನೋಟಕ್ಕೆ ನಕಲಿ ಎಂದು ಕಂಡುಬಾರದಂತಹ ಒಟ್ಟು 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಅಡಮಾನವಿರಿಸಿ, ಸಂಘದಿಂದ ರೂ ಒಂದು ಲಕ್ಷದ ನಲವತ್ತು ಸಾವಿರ ಹಣವನ್ನು ಪಡೆದು ಮೋಸ ಮಾಡಿರುತ್ತಾರೆ ಎ೦ದು ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.