22.7 C
Karnataka
Wednesday, April 2, 2025

ಅಕ್ರಮವಾಗಿ ಮದ್ಯ ಮಾರಾಟ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ವೇಣೂರು ಪೊಲೀಸರು ವಶಪಡಿಸಿಕೊ೦ಡಿದ್ದಾರೆ.
ಬೆಳ್ತಂಗಡಿ ನಿವಾಸಿ ಸತೀಶ್ (40) ಎಂಬಾತನು ಕುರ್ಲೊಟ್ಟು ಎಂಬಲ್ಲಿಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ, ದಾಳಿ ನಡೆಸಿದ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶ್ರೀಶೈಲ ಮುರಗೋಡ ಹಾಗೂ ಸಿಬ್ಬಂದಿಗಳ ತಂಡ ಆರೋಪಿತನ ವಶದಲ್ಲಿದ್ದ, 90 ಎಂ.ಎಲ್. ಮದ್ಯ ತುಂಬಿದ 32 ಸ್ಯಾಚೆಟ್ ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ., ಸ್ವಾಧೀನಪಡಿಸಿದ ಮದ್ಯದ ಒಟ್ಟು ಪ್ರಮಾಣ 2. 880 ಲೀಟರ್ ಆಗಿದ್ದು, ಅಂದಾಜು ಮೌಲ್ಯ ರೂ 1,312-00 ಆಗಿರುತ್ತದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles