17.5 C
Karnataka
Friday, November 22, 2024

ದೆಹಲಿ ಪೊಲೀಸ್ ಎ೦ದು ನ೦ಬಿಸಿ 16 ಲಕ್ಷ ರೂ. ದೋಚಿದರು !

ಪುತ್ತೂರು:ದೆಹಲಿ ಪೊಲೀಸ್ ಎ೦ದು ನ೦ಬಿಸಿ ಪುತ್ತೂರಿನ ವ್ಯಕ್ತಿಯೋವ೯ರಿ೦ದ ಅಪರಿಚಿತ ವ್ಯಕ್ತಿಗಳು ಆನ್ ಲೈನ್ ಮೂಲಕ 16,50,000 ರೂ.ದೋಚಿದ ಪ್ರಕರಣ ವರದಿಯಾಗಿದ್ದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ, ಪ್ರಕರಣ ದಾಖಲಾಗಿದೆ.
ಪುತ್ತೂರು ಬೊಳ್ವಾರು ನಿವಾಸಿಯಾಗಿರುವ ವ್ಯಕ್ತಿ ಪೊಲೀಸರಿಗೆ ನೀಡಿರುವ ದೂರಿನಂತೆ, ಸದ್ರಿಯವರ ದೂರವಾಣಿಗೆ ಮಾ. 28ರಂದು ಬೆಳಿಗ್ಗೆ, ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿದ್ದು, ಕರೆ ಸ್ವೀಕರಿಸಿ ಮಾತನಾಡಿದಾಗ, ಕರೆ ಮಾಡಿದ ವ್ಯಕ್ತಿಯು ನಾನು ದೆಹಲಿಯಿಂದ ಪೊಲೀಸ್ ಮಾತನಾಡುತ್ತಿರುವುದಾಗಿ ತಿಳಿಸಿ, ನಿಮ್ಮ ಮೇಲೆ ದೆಹಲಿಯಲ್ಲಿ ಮಾದಕ ವಸ್ತುವಿಗೆ ಸಂಬಂದಿಸಿದಂತೆ ಹಾಗೂ ಅಕ್ರಮ ಹಣ ಹೊಂದಿರುವ ಬಗ್ಗೆ ಮತ್ತು ಮಾನವ ಕಳ್ಳ ಸಾಗಾಣಿಕ ಪ್ರಕರಣ ದಾಖಲಾಗಿ, ಅರೆಸ್ಟ್ ಮಾಡಲು ಕೋರ್ಟ್ ನಿಂದ ವಾರಂಟ್ ಆಗಿದೆ. ನೀವು ದೆಹಲಿಯ ಸಿಬಿಐ ಕೋರ್ಟ್ ಗೆ ಹಾಜರಾಗಬೇಕು. ನಿಮಗೆ ಇಲ್ಲಿಗೆ ಬರಲು ಆಗದಿದ್ದರೆ ಈಗ ಆನ್ಲೈನ್ ಮೂಲಕ ಕೋರ್ಟ್ ನ ಕೇಸ್ ನಡೆಸುತ್ತೇವೆ. ನೀವು ನಿಮ್ಮ ಬ್ಯಾಂಕ್ ಅಕೌಂಟ್ ನಲ್ಲಿದ್ದ ಹಣವನ್ನು ನಾನು ಹೇಳುವ ಅಕೌಂಟ್ ನಂಬ್ರಕ್ಕೆ ವರ್ಗಾವಣೆ ಮಾಡಬೇಕು. ನಿಮ್ಮ ಕೋರ್ಟ್ ಕೇಸ್ ಮುಗಿದ ಮೇಲೆ ನಿಮಗೆ ನಿಮ್ಮ ಹಣ ವಾಪಾಸು ಸಿಗುತ್ತದೆ ಇಲ್ಲದಿದ್ದರೆ ನಿಮ್ಮ ಮನೆಗೆ ಬಂದು ನಿಮ್ಮನ್ನು ಅರೆಸ್ಟ್ ಮಾಡುತ್ತೇವೆ ಎಂಬುದಾಗಿ ತಿಳಿಸಿದ. ದೂರುದಾರರ ವಿರುದ್ದ ದೆಹಲಿಯಲ್ಲಿ ಪ್ರಕರಣ ದಾಖಲಾಗಿರುವಂತೆ ಬಿಂಬಿಸುವ ಕೆಲವೊಂದು ದಾಖಲೆಗಳನ್ನು ಅವರ ಮೊಬೈಲ್ ಫೋನ್ ನ ವಾಟ್ಸ್ ಆಪ್ ಗೆ ಅಪರಿಚಿತ ವ್ಯಕ್ತಿ ಕಳುಹಿಸಿದ್ದ. ದೂರುದಾರರು ಅಪರಿಚಿತನ ಮಾತನ್ನು ನಂಬಿ, ಗಾಬರಿಗೊಂಡು, ಅವರ ಬ್ಯಾಂಕ್ ಖಾತೆಯಿಂದ, RTGS ಮೂಲಕ ಅಪರಿಚಿತ ತಿಳಿಸಿದ ಬ್ಯಾಂಕ್ ಖಾತೆಗೆ ರೂ 16,50,000/- ಹಣವನ್ನು ವರ್ಗಾವಣೆ ಮಾಡಿರುತ್ತಾರೆ . ಸ್ವಲ್ಪ ಹೊತ್ತಿನ ಬಳಿಕ ಅದೇ ವ್ಯಕ್ತಿಯು ಮತ್ತೆ ಕರೆಮಾಡಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟ. ಇದರಿ೦ದ ದೂರದಾರರಿಗೆ ಅನುಮಾನ ಬಂದು ದೂರವಾಣಿ ಕರೆ ಕಡಿತಗೊಳಿಸಿದ್ದು, ತನ್ನ ಗೆಳೆಯರೊಂದಿಗೆ ಈ ಬಗ್ಗೆ ತಿಳಿಸಿದಾಗ ಇದು ಆನ್ ಲೈನ್ ಮೋಸದ ಕೃತ್ಯ ಎ೦ದು ತಿಳಿದುಬಂತು. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles