21.6 C
Karnataka
Thursday, November 14, 2024

ಅಕ್ರಮವಾಗಿ ಜಾನುವಾರುಗಳ ಸಾಗಾಟ

ಬೆಳ್ತಂಗಡಿ: ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದ 4 ಜಾನುವಾರುಗಳನ್ನು ವಾಹನ ಸಮೇತ ವೇಣೂರು ಪೊಲೀಸರು ವಶಪಡಿಸಿಕೊ೦ಡಿದ್ದಾರೆ.
ಶನಿವಾರ ಸಂಜೆ ಬೆಳ್ತಂಗಡಿ ತಾಲೂಕು ಬಜಿರೆ ಗ್ರಾಮದ ಬಾಡಾರು ಎಂಬಲ್ಲಿ ವೇಣೂರು- ನೈನಾಡು ಸಾರ್ವಜನಿಕ ರಸ್ತೆಯಲ್ಲಿ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶೈಲ ಡಿ. ಮುಗೋಡು ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದಾಗ, ಸದ್ರಿ ಮಾರ್ಗವಾಗಿ ಬಂದ ಅಶೋಕ್‌ ಲೈಲ್ಯಾಂಡ್‌ ದೋಸ್ತ್‌ ಗೂಡ್ಸ್‌ ವಾಹನವನ್ನು ತಪಾಸಣೆಗಾಗಿ ನಿಲ್ಲಿಸಲು ಸೂಚಿಸಿದರು. ವಾಹನ ಚಾಲಕನು ವಾಹನವನ್ನು ನಿಲ್ಲಿಸದೆ ವೇಣೂರು ಕಡೆಗೆ ಚಲಾಯಿಸಿದ್ದು, ಕೂಡಲೇ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಇಲಾಖಾ ಜೀಪಿನಲ್ಲಿ ಹಿಂಬಾಲಿಸಿಕೊಂಡು ಸುಮಾರು ½ ಕಿ.ಮೀ ದೂರ ಶಾಂತಿರೊಟ್ಟು ಎಂಬಲ್ಲಿಗೆ ತಲುಪಿದಾಗ, ವಾಹನವನ್ನು ರಸ್ತೆ ಬದಿ ನಿಲ್ಲಿಸಿ ಚಾಲಕ ಹಾಗೂ ಇನ್ನೋರ್ವ ವ್ಯಕ್ತಿ ವಾಹನದಿಂದ ಇಳಿದು ಗೇರುಗಿಡಗಳ ನಡುತೋಪಿನಲ್ಲಿ ಓಡಿ ತಪ್ಪಿಸಿಕೊಂಡಿರುತ್ತಾರೆ. ವಾಹನವನ್ನು ಪರಿಶೀಲಿಸಲಾಗಿ 4 ಜಾನುವಾರುಗಳನ್ನು ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಜಾನುವಾರುಗಳನ್ನು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ವಾಹನವನ್ನು ಸ್ವಾಧೀನಪಡಿಸಿಕೊಂಡು ವೇಣೂರು ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles