ಪುಂಜಾಲಕಟ್ಟೆ: ವಿದ್ಯಾಥಿ೯ಗೆ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಹಲ್ಲೆ ನಡೆಸಿರುವ ಪ್ರಕರಣ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವರದಿಯಾಗಿದ್ದು ಹಲ್ಲೆಗೊಳಗಾದ ವಿದ್ಯಾಥಿ೯ಆಸ್ಪತ್ರೆಗೆ ದಾಖಲಾಗಿದ್ದಾನೆ.
ಪ್ರಕರಣದ ಸಂತ್ರಸ್ಥ ಬಾಲಕನು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿಕೊಂಡಿದ್ದು, ಸದರಿ ಬಾಲಕನು ಆತನ ಬಾಬ್ತು ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ, ನ.28ರಂದು ಬೆಳಿಗ್ಗೆ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಪರಮೇಶ ಎಂಬವರು ಬಾಲಕನನ್ನು ವಿಚಾರಿಸಿ ಬಾಲಕನ ತಾಯಿಯ ಸಮಕ್ಷಮದಲ್ಲಿ ಬಾಲಕನಿಗೆ ಸಣ್ಣ ದೊಣ್ಣೆಯಿಂದ ಹಾಗೂ ಕೈಯಿಂದ ಹೊಡೆದಿರುತ್ತಾರೆ. ಈ ವೇಳೆ ಶಾಲಾ ಶಿಕ್ಷಕರಾದ ಪ್ರಮೀಳಾ ಮತ್ತು ರಮೇಶ್ ಎಂಬವರು ಬಾಲಕನಿಗೆ ಹೊಡೆಯಲು ಪ್ರೇರೇಪಿಸಿರುತ್ತಾರೆ. ಹಲ್ಲೆ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೇ ಸೈಕಲ್ ಕದ್ದು ಮಾರಾಟ ಮಾಡಿದ ಬಗ್ಗೆ ಕೇಸು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎ೦ದು ಸಂತ್ರಸ್ಥ ಬಾಲಕನು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.ಶಾಲೆಯಲ್ಲಿ ನಡೆದ ಹಲ್ಲೆಯಿಂದ ನ. 30 ರಂದು ಬೆಳಿಗ್ಗೆ ಬಾಲಕನಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.ಬಾಲಕನು ನೀಡಿದ ದೂರಿನ೦ತೆ ಪುಂಜಾಲಕಟ್ಟೆ ಠಾಣೆಯಲ್ಲಿ ಐಪಿಸಿ ಮತ್ತು ಬಾಲನ್ಯಾಯ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.