ಮಂಗಳೂರು: ನಗರದ ಕಂಕನಾಡಿ ಬಳಿಯಲ್ಲಿ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದ ಒವ೯ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ. ಕೇರಳ ರಾಜ್ಯದ ಮ೦ಜೇಶ್ವರ
ಆಬುಪಡ್ಪು ನಿವಾಸಿ ಪ್ರಶ್ವಿತ್ ( 25 ) ಬ೦ಧಿತ ಆರೋಪಿ.
ರವಿವಾರ ಮಂಗಳೂರು ನಗರದ ಕಂಕನಾಡಿ ಬಳಿಯಲ್ಲಿ ಒಬ್ಬನು ಖೋಟಾ ನೋಟುಗಳನ್ನು ವಶದಲ್ಲಿರಿಸಿಕೊಂಡು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದಾನೆ ಎಂಬುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ಬ೦ಧಿಸಿದರು. ಆರೋಪಿ 500 ರೂಪಾಯಿ ಮುಖಬೆಲೆಯ, 200 ರೂಪಾಯಿ ಮುಖಬೆಲೆಯ ಮತ್ತು 100 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9 ಸಾವಿರ ರೂಗಳ ಖೋಟಾ ನೋಟುಗಳನ್ನು ಚಲಾವಣೆ ಮಾಡಿರುತ್ತಾನೆ. ಆರೋಪಿಯಿ೦ದ ನಕಲಿ ನೋಟುಗಳಾದ 500 ರೂ ಮುಖಬೆಲೆಯ 3 ನೋಟುಗಳು, 200 ರೂ ಮುಖಬೆಲೆಯ 2 ನೋಟುಗಳು ಹಾಗೂ 100 ರೂ ಮುಖಬೆಲೆಯ 3 ನೋಟುಗಳು ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿರುತ್ತಾರೆ.
ಆರೋಪಿಯಿ೦ದ ಖೋಟಾ ನೋಟುಗಳು (2200/-),ಮೊಬೈಲ್ ಫೋನ್ ,ಅಸಲಿ ನೋಟುಗಳು -35 ( ಮೌಲ್ಯ-4250/-) ವಶಪಡಿಸಿಕೊಳ್ಳಲಾಗಿದೆ.ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ಅವರ ನೇತೃತ್ವದ ಕಾಯಾ೯ಚರಣೆಯಲ್ಲಿ ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿಯವರು ಪಾಲ್ಗೊ೦ಡಿದ್ದರು.