ಉಪ್ಪಿನಂಗಡಿ:ಮನೆಯ ಅಂಗಳಕ್ಕೆ ಬ೦ದ ಅಪರಿಚಿತ ಓರ್ವ ಗಂಡಸು ಮತ್ತು ಹೆಂಗಸು ಕುಡಿಯಲು ನೀರು ಕೇಳಿ ಚಿನ್ನ ದೋಚಿ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯದಲ್ಲಿ ನಡೆದಿದೆ. ಶನಿವಾರ ಕರಾಯ ಗ್ರಾಮದ ನಿವಾಸಿ ಮಹಿಳೆಯೋವ೯ರು ಮನೆಯಲ್ಲಿದ್ದಾಗ, ಮನೆಯ ಅಂಗಳಕ್ಕೆ ಅಪರಿಚಿತ ಓರ್ವ ಗಂಡಸು ಮತ್ತು ಓರ್ವ ಹೆಂಗಸು ಬಂದಿರುತ್ತಾರೆ. ಅವರುಗಳು ಮಾತನಾಡಿ, ಮನೆಯಲ್ಲಿರುವ ಸದಸ್ಯರುಗಳ ಬಗ್ಗೆ ವಿಚಾರಿಸಿ, ಕುಡಿಯಲು ನೀರು ಕೇಳಿರುತ್ತಾರೆ. ಮನೆಯಾಕೆ ನೀರು ತರಲು ಒಳಗೆ ತೆರಳಿದಾಗ, ಅಪರಿಚಿತರು ಮನೆಯ ಒಳಗೆ ಪ್ರವೇಶಿಸಿ, ಮನೆಯಲ್ಲಿದ್ದ ಗೋಡ್ರೇಜ್ ಬಾಗಿಲು ತೆರೆದು ಹುಡುಕಾಡುತ್ತಿರುವುದನ್ನು ಕಂಡಬ೦ತು. ಬೊಬ್ಬೆ ಹಾಕಿ ತನ್ನ ಗಂಡನಿಗೆ ದೂರವಾಣಿ ಕರೆ ಮಾಡಲು ಯತ್ನಿಸಿದ್ದು, ಅಪರಿಚಿತ ವ್ಯಕ್ತಿಗಳು ಅವರ ಕೈಯಲ್ಲಿದ್ದ ಮೊಬೈಲ್ ಫೋನನ್ನು ಎಳೆದು ಬಿಸಾಡಿ, ಹಲ್ಲೆ ನಡೆಸಿ, ಚೂರಿಯನ್ನು ತೋರಿಸಿ ಬೆದರಿಸಿ, ಕೈಯಲ್ಲಿದ್ದ ಎರಡು ಚಿನ್ನದ ಉಂಗುರಗಳನ್ನು ಹಾಗೂ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡಿರುತ್ತಾರೆ. ಈ ವೇಳೆ ಬೊಬ್ಬೆ ಕೇಳಿ ನೆರೆಮನೆಯ ಮಹಿಳೆ ಬರುತ್ತಿರುವುದನ್ನು ಕಂಡ ಅಪರಿಚಿತರು ಮೋಟಾರ್ ಸೈಕಲಿನಲ್ಲಿ ಪರಾರಿಯಾಗಿದ್ದು, ಅಪರಿಚಿತರು ದೋಚಿದ ಆಭರಣಗಳ ಮೌಲ್ಯ ಅಂದಾಜು ಮೌಲ್ಯ ರೂ 1,00,000 ರೂ. ಆಗಬಹುದು ಎಂಬುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.