ಮಂಗಳೂರು: 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎಸ್ಡಿಆರ್ಐ, ಎನ್ಡಿಆರ್ಐ ಮಾರ್ಗ ಸೂಚಿಗಳ ಪ್ರಕಾರ ನಿಯಮಾನುಸಾರ ಬೆಳೆ ಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ ರೂ. 2000 ವರೆಗೆ ಪಾವತಿಸಲು ಸರ್ಕಾರವು ಆದೇಶಿಸಿದೆ.
ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿ ಆಧಾರದ ಮೇಲೆ ಫ್ರೂಟ್ಸ್ ಐಡಿ ಹೊಂದಿರುವ, ಪಹಣಿ ಜೋಡಣೆಯಾಗಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ ಹಂತವಾಗಿ ಪರಿಹಾರ ಪಾವತಿಸುವ ಪ್ರಕ್ರಿಯೆ ಆರಂಭವಾಗಿದೆ.
ಬೆಳೆ ಹಾನಿ ಪರಿಹಾರ ಪಾವತಿ ಸಂಬಂಧ ಮಾಹಿತಿಯನ್ನು ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಸಹಾಯವಾಣಿಗಳನ್ನು ತೆರೆಯಲಾಗಿದೆ.
ಸಹಾಯವಾಣಿ ವಿವರ ಇಂತಿವೆ:
ಜಿಲ್ಲಾಧಿಕಾರಿಗಳ ಕಚೇರಿ, ದೂರವಾಣಿ ಸಂಖ್ಯೆ: 0824-2442590, 1077, ಮಂಗಳೂರು ಉಪವಿಭಾಗ ಅಧಿಕಾರಿಗಳ ಕಚೇರಿ, ದೂರವಾಣಿ ಸಂಖ್ಯೆ: 0824-222058, ಮಂಗಳೂರು ತಾಲೂಕು ಕಚೇರಿ ದೂರವಾಣಿ ಸಂಖ್ಯೆ: 0824-2220587 ಹಾಗೂ ಮೂಡಬಿದ್ರೆ ತಾಲೂಕು ಕಚೇರಿ ದೂರವಾಣಿ ಸಂಖ್ಯೆ: 08258-238100 ಅನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.