ಮಂಗಳೂರು{: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ ) 5 ನೇ జిಲ್ಲಾ ಸಮ್ಮೇಳನ ಡಿ.5. ರಂದು ಗುರುವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಸುದ್ದಿ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ )ದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಮಂಗಳ
ವಾರ ತಿಳಿಸಿದ್ದಾರೆ.
ಬೆಳಗ್ಗೆ 9ರಿಂದ ಸಂಜೆ 5ಗಂಟೆ ವರೆಗೆ ವಿವಿಧ ಕಾರ್ಯಕ್ರಮ ಗಳೊಂದಿಗೆದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ 5ನೇ ಸಮ್ಮೇಳನ ದಿ.ಮನೋಹರ ಪ್ರಸಾದ್ ವೇದಿಕೆ, ದಿ. ಭುವನೇಂದ್ರ ಪುದುವೆಟ್ಟು ಸಭಾಂಗಣದಲ್ಲಿ ನಡೆಯಲಿದೆ.ಪೂರ್ವಾಹ್ನ 10ಗಂಟೆಗೆ ಸಮ್ಮೇಳನ ಉದ್ಘಾಟನೆಯನ್ನು ಮೂಡುಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ನೆರವೇರಿಸಲಿದ್ದಾರೆ.ಸಮ್ಮೇಳನದ ಸರ್ವಾಧ್ಯಕ್ಷ ರಾಗಿ ಹಿರಿಯ ಪತ್ರಕರ್ತ ಶಿವಸುಬ್ರಮಣ್ಯ ಕೆ ಭಾಗವಹಿಸಲಿದ್ದಾರೆ.ಕರ್ನಾಟಕ ಸರಕಾರದ ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ಸ್ಮರಣ ಸಂಚಿಕೆ ಬಿಡುಗಡೆ ಗೊಳಿಸಲಿದ್ದಾರೆ.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪತ್ರಕರ್ತರ ಕಲ್ಯಾಣ ನಿಧಿಗೆ ಚಾಲನೆ ನೀಡಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ (ರಿ)ಶ್ರೀನಿವಾಸ್ ನಾಯಕ್ ಇಂದಾಜೆ,ಆಶಯ ನುಡಿಗಳನ್ನಾಡಲಿದ್ದಾರೆ. ಶಾಸಕ ಡಿ. ವೇದವ್ಯಾಸ ಕಾಮತ್,ಪುಸ್ತಕ ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ.ಪತ್ರಕರ್ತ ದಿ. ವೀರೇಶ್ ಸ್ಮರಣಾರ್ಥಛಾಯಾಚಿತ್ರ ಪ್ರದರ್ಶನ ಉದ್ಘಾಟನೆಯನ್ನು ಶಾಸಕ ಡಾ. ವೈ. ಭರತ್ ಶೆಟ್ಟಿ ನೆರವೇರಿಸಲಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ಪ್ರಾಯೋಜಕರಿಗೆ ಸನ್ಮಾನ ಮಾಡಲಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ವನ್ನು ವಿಧಾನ ಪರಿಷತ್ ಸದಸ್ಯಡಾ. ಮಂಜುನಾಥ್ ಭಂಡಾರಿ ಅನಾವರಣಗೊಳಿಸಲಿರುವರು.
ಕುತ್ಲೂರು ಶಾಲಾ ವಿದ್ಯಾರ್ಥಿ ಬ್ಯಾಂಡ್ಸೆಟ್ ಗ್ರೂಪ್‌ಗೆ ಸಮವಸ್ತ್ರ ವಿತರಣೆಯನ್ನು ಬೆಳ್ತಂಗಡಿ ವಿಧಾನ ಸಭಾಕ್ಷೇತ್ರದ ಶಾಸಕ ಹರೀಶ್ ಪೂಂಜ ನೆರವೇರಿಸಲಿರುವರು.ಎಂ ಆರ್ ಪಿ ಎಲ್ ನ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ಹಸಿರೇ ಉಸಿರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.ಹರಿಹರ ಸರಕಾರಿ ಶಾಲೆಗೆ ಎಂ.ಸಿ.ಫ್ ನಚೀಫ್ ಪ್ರೊಡಕ್ಷನ್ ಆಫೀಸರ್ ಗಿರೀಶ್ ಸಮವಸ್ತ್ರ ವಿತರಣೆ ಮಾಡಲಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ)ದ ಅಧ್ಯಕ್ಷ. ಶಿವಾನಂದ ತಗಡೂರುಸಾಧಕರನ ಸನ್ಮಾನಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ಅಶೋಕ್ ಕುಮಾರ್ ರೈ,ಐವನ್ ಡಿ’ಸೋಜ,ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ,ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್,ಮಾಜಿ ಸಚಿವ ಬಿ. ರಮಾನಾಥ್ ರೈ,ಕೃಷ್ಣ ಜೆ. ಪಾಲೆಮಾರ್,ಮಾಜಿ ಶಾಸಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್,ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ ಘಟಕದ ಸಭಾಪತಿ ಸಿ.ಎ.ಶಾಂತಾರಾಮ ಶೆಟ್ಟಿ,ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ, ರೋಹನ್ ಮೊಂತೆರೊ( ಅಧ್ಯಕ್ಷರು ಹಾಗೂ ಆಡಳಿತ ನಿರ್ದೇಶಕರು, ರೋಹನ್ ಕಾರ್ಪೊರೇಶನ್) ಕೆ.ಪಿ. ಸುಚರಿತ ಶೆಟ್ಟಿ(ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ)ಸಾಂಬಾಶಿವ ರಾವ್( ಆಡಳಿತ ನಿರ್ದೇಶಕರು, ಶ್ರೀ ಅನಘಾ ರಿಫೈನರಿಸ್) ಭಾಗವಹಿಸಲಿದ್ದಾರೆ. ಸರದಾರ.ಸಮ್ಮೇಳನದಲ್ಲಿ ‘ಮಾಧ್ಯಮ ಹಾಗೂ ಯುವಜನತೆ’ ಗೋಷ್ಠಿ ,ಅನ್ನಪೂರ್ಣೇಶ್ವರಿ ಅಂಧ ಕಲಾವಿದರಿಂದ ಸಂಗೀತ ಕಾರ್ಯಕ್ರಮ. ಹಿರಿಯ ಪತ್ರಕರ್ತ ಮನೋ ಹರ ಪ್ರಸಾದ್ ಸಂಸ್ಮರಣೆ ,ತಾಲೂಕು ಪತ್ರಕರ್ತರ ಸಂಘಗಳ ಅಧ್ಯಕ್ಷ ರೊಂದಿಗೆ ಸಂವಾದ,ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.ಪೂರ್ವಾಹ್ನ 9ಕ್ಕೆಸತೀಶ್ ಇರಾ, ರಿಷಿಕಾ ಕುಂದೇಶ್ವರ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಸರಕಾರದ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯ ಕ್ರಮ ನಡೆಸಲಿದ್ದಾರೆ. ಮಂಗಳೂರು ವಿಶ್ವ ವಿದ್ಯಾ ನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ ಸಮಾರೋಪ ಭಾಷಣ ಮಾಡಲಿ ದ್ದಾರೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಪ್ರಮಾಣ ಪತ್ರ ವಿತರಿಸಲಿದ್ದಾರೆ.
ಎಂ.ಆರ್.ಪಿ.ಎಲ್ ನ ಚೀಫ್ ಜನರಲ್ ಮ್ಯಾನೇಜರ್ ರುಡಾಲ್ಫ್ ನೊರೊನ್ನಾ ಪತ್ರಿಕೋದ್ಯಮ ಉಪನ್ಯಾಸಕರನ್ನು ಗೌರವಿಸ ಲಿದ್ದಾರೆ.ಮುಖ್ಯ ಅತಿಥಿಗಳಾಗಿ ಶಾಸಕರಾದ ರಾಜೇಶ್ ನಾಯ್ಕ್ ಯು,ಉಮಾನಾಥ ಎ. ಕೋಟ್ಯಾನ್ ,ಭಾಗೀರಥಿ ಮುರುಳ್ಯ, ಪ್ರತಾಪಸಿಂಹ ನಾಯಕ್, ಕಿಶೋರ್ ಕುಮಾರ್ ಪುತ್ತೂರು,ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ,ದ.ಕ ಎಸ್.ಪಿಯತೀಶ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ.,
ಆನಂದ್ ಸಿ.ಎಲ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತಆನಂದ್ ಸಿ.ಎಲ್.ಮಂಗಳಾ ಹಾಸ್ಪಿಟಲ್
ಆಡಳಿತ ನಿರ್ದೇಶಕ ಡಾ. ಗಣಪತಿ ಭಟ್,ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್, ಗೋಪಾಲಕೃಷ್ಣ ಭಟ್,ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಸುಧಾಕರ ಕೊಟ್ಟಾರಿ,ಬ್ಯಾಂಕ್ ಆಫ್ ಬರೋಡ ಜನರಲ್ ಮ್ಯಾನೇಜರ್
ರಾಜೇಶ್ ಖನ್ನಾ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ,ಉದ್ಯಮಿ ರಮೇಶ್ ನಾಯಕ್, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಗಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಯಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರೈ ಕಟ್ಟ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಉಪಸ್ಥಿತರಿದ್ದರು