16.7 C
Karnataka
Saturday, November 23, 2024

ದ.ಕನ್ನಡ , ಉಡುಪಿ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿಗಳಾದ ಕ್ಯಾ. ಬ್ರಿಜೇಶ್‌ ಚೌಟ, ಕೋಟ ಶ್ರೀನಿವಾಸ ಪೂಜಾರಿ ಗೆಲುವು

ಮ೦ಗಳೂರು: ದ.ಕನ್ನಡ ಹಾಗೂ ಉಡುಪಿ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಕ್ಯಾ. ಬ್ರಿಜೇಶ್‌ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದಾರೆ.
ದ.ಕ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ ವಿರುದ್ದ 1, 49,208 ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಕ್ಯಾ. ಬ್ರಿಜೇಶ್‌ ಚೌಟ ಅವರು 7,64,132 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ 614924 ಮತಗಳನ್ನು ಪಡೆದಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರ ವಿರುದ್ದ 2,57,178 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಕೋಟ ಶ್ರೀನಿವಾಸ ಪೂಜಾರಿ ಅವರು, 7,27,393 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆ ಅವರು 4,70,215 ಮತಗಳನ್ನು ಗಳಿಸಿದ್ದಾರೆ.
ಈ ಬಾರಿ ದ.ಕ ಲೋಕಸಭಾ ಕ್ಷೇತ್ರದಲ್ಲಿ ನೋಟಾಗೆ 23576 ಮತಗಳು ಹಾಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 11,223 ರಷ್ಟು ಮತಗಳು ಚಲಾವಣೆ ಆಗಿದೆ.

ದ.ಕ ಲೋಕಸಭಾ ಕ್ಷೇತ್ರದಲ್ಲಿ ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿ ಕಾಂತಪ್ಪ ಅಲಂಗಾರ್ 4232 ಮತಗಳನ್ನು ,ಕರುನಾಡ ಸೇವಕರ ಪಾರ್ಟಿ ಅಭ್ಯರ್ಥಿ ದುರ್ಗಾ ಪ್ರಸಾದ್ 2592 ಮತಗಳನ್ನು ಗಳಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾದ ಸುಪ್ರಿತ್ ಕುಮಾರ್ ಪೂಜಾರಿ 1901 ಮತಗಳನ್ನು. ದೀಪಕ್ ರಾಜೇಶ್ ಕುವೆಲ್ಲೊ 976 ಮತಗಳನ್ನು ಹಾಗೂ ಮ್ಯಾಕ್ಸಿಮ್ ಪಿಂಟೊ 1690 ಮತಗಳನ್ನು ಪಡೆದುಕೊ೦ಡಿದ್ದಾರೆ.ಉತ್ತಮ ಪ್ರಜಾಕೀಯ ಪಾರ್ಟಿ ಪ್ರಜಾಕೀಯ ಮನೋಹರ್ 971, ಕರ್ನಾಟಕ ರಾಷ್ಟ್ರ ಸಮಿತಿ ರಂಜಿನಿ ಎಂ 776 ಮತಗಳನ್ಗನು ಗಳಿಸಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಲೈ ಮುಗಿಲನ್ ಎಂಪಿ ಅವರು ಬಿಜೆಪಿ ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾದ ಆಕಾಂಕ್ಷ ರಂಜನ್, ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಪುತ್ತೂರು ಉಪ ವಿಭಾಗ ಅಧಿಕಾರಿ ಜುಬಿನ್ ಮೋಹ ಪಾತ್ರ, ಪ್ರೊಬೆಷನರಿ ಐಎಎಸ್ ಅಧಿಕಾರಿ ಪಿ. ಶ್ರವಣ್ ಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles