17.5 C
Karnataka
Friday, November 22, 2024

ಸಂವಿಧಾನ ಜಾಥಾ ಯಶಸ್ಸಿಗೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಜ. 26 ರಿಂದ ಜಿಲ್ಲೆಯಲ್ಲಿ ನಡೆಯಲಿರುವ ಸಂವಿಧಾನ ಜಾಥಾ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಅವರು ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂವಿಧಾನ ಜಾಥಾ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಸಂವಿಧಾನದ ವಿವಿಧ ಅಂಶಗಳ ಮಹತ್ವ ಸಾರುವ ಆಕರ್ಷಕ ಸ್ಥಬ್ಧಚಿತ್ರ ಹಾಗೂ ಕಲಾ ತಂಡಗಳ ಪ್ರದರ್ಶನ ನಡೆಯಲಿದೆ. ಜಿಲ್ಲೆಯ ಎಲ್ಲಾ ನಗರ ಮತ್ತು ಗ್ರಾಮಗಳಲ್ಲಿ ಈ ಜಾಥಾ ಸಂಚರಿಸಲಿದೆ. ಇದಕ್ಕಾಗಿ ಎರಡು ತಂಡಗಳಲ್ಲಿ ಜಿಲ್ಲೆಯಾದ್ಯಂತ ಜಾಥಾ ಹೋಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜನವರಿ 26ರಂದು ಮಂಗಳೂರು ಪುರಭವನ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಾಥಾಗೆ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಸಂತೋಷ್ ಮತ್ತಿತರರು ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles