15.6 C
Karnataka
Thursday, January 9, 2025

ಈ ವರ್ಷ 3,000 ಕುಟುಂಬಗಳಿಗೆ 6 ಕೋಟಿ ರೂ. ಮಿಕ್ಕಿ ನೆರವು ವಿತರಣೆ”: ಡಾ.ಕೆ. ಪ್ರಕಾಶ್ ಶೆಟ್ಟಿ

ಮಂಗಳೂರು: ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿ. 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷರು ಹಾಗು ಸಹ- ಸಂಸ್ಥಾಪಕರೂ ಆಗಿರುವ ಡಾ. ತೇಜಸ್ವಿನಿ ಅನಂತಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ. ಮೋಹನ ಆಳ್ವ, ಕಾಪು ವಿಧನಾಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ.ಗ್ರೂಪ್ ನ ಆಡಳಿತ ನಿರ್ದೇಶಕರಾದ ಗೌರವ್ ಪಿ. ಶೆಟ್ಟಿ ಮತ್ತು ಉಪಸ್ಥಿತರಿರಲಿದ್ದಾರೆ“ ಎಂದು ಎಂ.ಆರ್.ಜಿ.ಗ್ರೂಪ್ ಚೇರ್ಮನ್ ಡಾ. ಕೆ.ಪ್ರಕಾಶ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.


“ಈ ವರ್ಷ ಒಟ್ಟು 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ ನೆರವನ್ನು ವಿತರಿಸಲಾಗುತ್ತಿದೆ. ಇದರಿಂದ ಸುಮಾರು ಹದಿನೈದು ಸಾವಿರ ಮಂದಿಗೆ ಪ್ರಯೋಜನವಾಗಲಿದೆ. ಫಲಾನುಭವಿಗಳ ಆಯ್ಕೆಯಲ್ಲಿ ಒಂದು ನಿಗದಿತ ಮಾನದಂಡವನ್ನು ಅನುಸರಿಸಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ, ಅವಶ್ಯ ಹಿಮ್ಮಾಹಿತಿಗಳನ್ನು ಪಡೆದು ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಸಮಾಜದಲ್ಲಿ ಪರಿವರ್ತನೆ ತರಬಲ್ಲಂತಹ, ಸಾಮೂಹಿಕ ಹಿತದ ಕಾರ್ಯಕ್ರಮಗಳನ್ನು ಕೈಗೊಂಡ ಸಂಘ ಸಂಸ್ಥೆಗಳನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ. ಪ್ರತೀ ವರ್ಷದ ಶಿಷ್ಟಾಚಾರದಂತೆ ಫಲಾನುಭವಿಗಳನ್ನು ಕರೆತರಲು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಸ್ವಯಂಸೇವಕರ ತಂಡಗಳಿವೆ. ನೆರವು ವಿತರಣೆ ನಡೆಯುವ ಸ್ಥಳದಲಿ 25 ಕೌಂಟರ್ ಗಳನ್ನು ತೆರೆಯಲಾಗುತ್ತದೆ. ಈಗಾಗಲೇ ವಿತರಣೆ ಮಾಡಿರುವ ಟೋಕನ್ ಗಳನ್ನು ತೋರಿಸಿ ಕೌಂಟರ್ ಗಳಲ್ಲಿ ನೆರವಿನ ಚೆಕ್ ಪಡೆಯಬಹುದು. ಎಲ್ಲಿಯೂ ಅವ್ಯವಸ್ಥೆಗಳಿಗೆ ಆಸ್ಪದ ಇಲ್ಲದಂತೆ ನೋಡಿಕೊಳ್ಳಲಾಗುತ್ತದೆ. ಮಾನಸಿಕ ವಿಕಲತೆ, ಹುಟ್ಟಿನಿಂದ ಬರುವ ದೀರ್ಘಕಾಲೀನ ಚಿಕಿತ್ಸೆ ಅವಶ್ಯವಿರುವ ಖಾಯಿಲೆ ಪೀಡಿತರಿಗೆ, ಅಂಗವೈಕಲ್ಯ, ಕ್ಯಾನ್ಸರ್ ಮುಂತಾದ ಖಾಯಿಲೆಗಳಿಂದ ಬಾಧಿತರಾಗಿರುವವರಿಗೆ ಚಿಕಿತ್ಸೆಗಾಗಿ ಆದ್ಯತೆಯ ಮೇಲೆ ನೆರವು ನೀಡುವುದನ್ನು ಪರಿಗಣಿಸಲಾಗಿದೆ. ಶಿಕ್ಷಣ ಮುಂದುವರಿಸಲು ಕಷ್ಟ ಪಡುತ್ತಿರುವವರಿಗೆ, ಕ್ರೀಡಾ ಕ್ಷೇತ್ರದ ಸಾಧಕರಿಗೆ, ಉತ್ತಮ ಶೈಕ್ಷಣಿಕ ಸಾಧನೆ ಮಾಡಿದವರಿಗೆ ಉತ್ತೇಜನ ನೀಡುವುದಕ್ಕಾಗಿ ಅವರನ್ನು “ನೆರವು” ನೀಡಲು ಆಯ್ಕೆ ಮಾಡಲಾಗಿದೆ“ ಎಂದರು.
ಹಿಂದಿನ ವರ್ಷಗಳಲ್ಲಿ ಸಂಘ ಸಂಸ್ಥೆಗಳಿಗೆ ನೀಡಲಾದ ನೆರವು ಆಯಾ ಪರಿಸರದಲ್ಲಿ ಧನಾತ್ಮಕ ಪರಿಣಾಮ ಬೀರಿದೆ. ಸಾರ್ವಜನಿಕ ಆಸ್ತಿಗಳ ನಿರ್ಮಾಣ ಆಗಿದೆ. ಅವಕಾಶವಂಚಿತರು ’ನೆರವು’ ಪಡೆದುಕೊಂಡು ಸ್ವಾವಲಂಬಿಯಾದ ಉದಾಹರಣೆಗಳಿವೆ. ಸಾಮಾಜಿಕ ಜವಾಬ್ದಾರಿಯ ನೆಲೆಯಲ್ಲಿ ನಾವು ಕೈಗೊಂಡ ಈ ಸೇವಾ ರೂಪದ ಕಾರ್ಯಕ್ರಮ ಸಾರ್ವಜನಿಕ ಮನ್ನಣೆ ಪಡೆದಿರುವುದು ಆಯೋಜಕರಾದ ನಮಗೆ ಸಾರ್ಥಕ್ಯ ಭಾವನೆಯನ್ನು ಮೂಡಿಸಿದೆ. ಅನುಭೂತಿ ಮತ್ತು ಬದ್ಧತೆಯಿಂದ ಕೈಗೊಂಡ “ನೆರವು” ಕಾರ್ಯಕ್ರಮ ಅನುಷ್ಠಾನದಲ್ಲಿ ನಮ್ಮ ತಂಡ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡಿದೆ. ಶಿಕ್ಷಣ ಉಪಕ್ರಮದಡಿ ನೆರವು ಪಡೆದವರಲ್ಲಿ ಕೆಲವರು ಈಗ ಉದ್ಯೋಗಸ್ಥರಾಗಿ, ತಾವು ಇತರರಿಗೆ ಸಹಾಯ ಮಾಡುವ ಸ್ಥಿತಿಗೆ ತಲುಪಿರುವುದು ಈ ಯೋಜನೆ ತಂದ ಮಾನವೀಯ ಬದಲಾವಣೆಯಾಗಿದೆ“ ಎಂದು ಹೇಳಿದರು.

ಮೊದಲ ವರ್ಷ ವಿತರಣೆ ಮಾಡಲಾದ ಮೊತ್ತ 1.25 ಕೋಟಿ ರೂಪಾಯಿ. ವರ್ಷದಿಂದ ಈ ಮೊತ್ತ ಏರುತ್ತಾ ಹೋಗಿದೆ. ವಷ೯ದಿ೦ದ ಗಳ ಸಂಖ್ಯೆ ಹೆಚ್ಚುತ್ತಿದೆ, ಸಹಜವಾಗಿ ಮೊತ್ತವೂ ಹೆಚ್ಚಾಗಿದೆ. ಈ ಯೋಜನೆಯ ವ್ಯಾಪ್ತಿ ದಕ್ಷಿಣ ಕನ್ನಡ, ಉಡುಪಿ ಮತ್ತು ಗಡಿನಾಡು ಕಾಸರಗೋಡು ಜಿಲ್ಲೆಗಳು. (ಕೆಲವು ವಿಶೇಷ ಪ್ರಕರಣಗಳಲ್ಲಿ ಮಾನವೀಯತೆಯ ಹಿನ್ನೆಲೆಯಲ್ಲಿ ಈ ಗಡಿಯನ್ನು ದಾಟಿಯೂ ನೆರವು ನೀಡಲಾಗಿದೆ)ಪ್ರತೀ ವ್ಯಕ್ತಿಗೆ ಅವರವರ ಅವಶ್ಯಕತೆಯನ್ನು ಪರಿಗಣಿಸಿ ಕನಿಷ್ಠ 10,000 ರೂ.ಗಳಿಂದ ಗರಿಷ್ಠ 1,00,000 ರೂ.ಗಳವರೆಗೆ ನೀಡಲಾಗಿದೆ, ಆರೋಗ್ಯ ರಕ್ಷಣೆ, ಚಿಕಿತ್ಸೆಗೆ ಮೊದಲಾದ್ಯತೆ ನೀಡಲಾಗಿದೆ.ಸಂಘ ಸಂಸ್ಥೆಗಳಾದರೆ ಕನಿಷ್ಠ 1,00,000 ರೂ.ಗಳಿಂದ ಗರಿಷ್ಠ 10,00,000 ರೂ.ಗಳವರೆಗೆ ನೆರವು ನೀಡಲಾಗಿದೆ.
ವೈದ್ಯಕೀಯ ಪ್ರಕರಣಗಳಲ್ಲಿ ಅವಶ್ಯ ದಾಖಲೆಗಳನ್ನು ಪಡೆದು, ಪರಿಶೀಲಿಸಿ, ಹಿಮ್ಮಾಹಿತಿ ಪಡೆದು ನೆರವು ನೀಡಲಾಗಿದೆ. ಬಹುತೇಕ ಅರ್ಜಿಗಳು ವೈದ್ಯಕೀಯ ನೆರವನ್ನು ಕೋರಿದವುಗಳಾಗಿವೆ. ಸಂಘ ಸಂಸ್ಥೆಗಳ ಸಂದರ್ಭದಲ್ಲಿ ಅವುಗಳ ಚಟುವಟಿಕೆ ಸ್ವಚ್ಚತೆ ಕಾಪಾಡುವಿಕೆ, ಮಹಿಳಾ ಸಶಕ್ತೀಕರಣ, ಯುವಜನರ ಸಬಲೀಕರಣ, ಕೌಶಲ್ಯೀಕರಣ ಸಹಿತ ಸಾಮಾಜಿಕ ಪರಿವರ್ತನೆಗೆ ಅವುಗಳ ಕೊಡುಗೆಯನ್ನು ಗಮನಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles