21.4 C
Karnataka
Sunday, June 15, 2025

ಐವತ್ತು ಸಾವಿರ ರೂ. ಲಂಚಕ್ಕೆ ಬೇಡಿಕೆ: ಗಣಿ ಇಲಾಖೆ ಉಪನಿರ್ದೇಶಕರು ಸೇರಿ ಮೂವರು ವಶಕ್ಕೆ

ಮ೦ಗಳೂರು: ಮನೆ ಕಟ್ಟುವ ಉದ್ದೇಶದಿಂದ ಕಟ್ಟಡ ಕಲ್ಲು ತೆಗೆದು ಸಮತಟ್ಟು ಮಾಡಲು ಅನುಮತಿಗೆ ಐವತ್ತು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗಣಿ ಇಲಾಖೆ ಉಪನಿರ್ದೇಶಕಿ, ಕಚೇರಿ ಸಿಬ್ಬಂದಿ ಹಾಗೂ ಚಾಲಕನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೃಷ್ಣವೇಣಿ

ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ,ಕಚೇರಿ ಸಿಬ್ಬಂದಿ ಪ್ರದೀಪ್ ಹಾಗೂ ಚಾಲಕ ಮಧು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು.

ಪ್ರದೀಪ್

ಪಿರ್ಯಾದಿದಾರರ ಹೆಸರಿಗೆ ಜಿ.ಪಿ.ಎ ಆಗಿರುವ ತಮ್ಮ ಪರಿಚಯದವರ ಹೆಸರಿನಲ್ಲಿ ಇರುವ ಉಳ್ಳಾಲ ತಾಲೂಕು ಇರಾ ಗ್ರಾಮದಲ್ಲಿ 1.39 ಎಕರೆ ವಿಸ್ತೀರ್ಣದ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆಯನ್ನು ಕಟ್ಟುವ ಉದ್ದೇಶದಿಂದ ಕಟ್ಟಡ ಕಲ್ಲು ತೆಗೆದು ಸಮತಟ್ಟು ಮಾಡಲು ಅನುಮತಿ ನೀಡಲು ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು.

ಮಧು

ಉಳ್ಳಾಲ ತಾಲೂಕು ತಹಶೀಲ್ದಾರ್ ಅವರು ಸಮತಟ್ಟು ಮಾಡುವ ಸಲುವಾಗಿ ಜಮೀನಿನಲ್ಲಿ ಲಭ್ಯವಿರುವ ಕಟ್ಟಡಕಲ್ಲು ತೆಗೆಯಲು ಪ್ರಮಾಣಪತ್ರ/ದೃಢಿಕರಣ ಪತ್ರ ನೀಡಬಹುದಾಗಿದೆ ಎಂಬುದಾಗಿ ವರದಿ ಸಲ್ಲಿಸಿದ್ದರೂ ಕೂಡ ಗಣಿ ಇಲಾಖೆಯಿಂದ ಅನುಮತಿ ನೀಡಿರುವುದಿಲ್ಲ.

ಅರ್ಜಿಯ ಬಗ್ಗೆ ವಿಚಾರಿಸಲು ಪಿರ್ಯಾದಿದಾರರು ಮಂಗಳೂರು ಗಣಿ ಇಲಾಖೆ ಕಛೇರಿಗೆ ತೆರಳಿದ್ದು, ಉಪನಿರ್ದೇಶಕಿ ಕೃಷ್ಣವೇಣಿ ಅವರು ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಯಿಸಿ ಫೈಲಿಗೆ 50,000 ರೂ. ತಗೊಳ್ಳಿ, ನಂತರ ಸೈನ್ ಮಾಡುವ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕೃಷ್ಣವೇಣಿ ಮತ್ತು ಸಿಬ್ಬಂದಿ ಪ್ರದೀಪ್ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.
ಮೇ 28 ರಂದು ಕೃಷ್ಣವೇಣಿ ಅವರು ಚಾಲಕ ಮಧುರ ಅವರ ಮೂಲಕ 50,000 ರೂ. ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಅಧಿಕಾರಿ ಮತ್ತು ಸಿಬ್ಬಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಈ ಕಾರ್ಯಾಚರಣೆಯಲ್ಲಿ ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ . ಅವರು ಹಾಗೂ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣಿಯ ಪೊಲೀಸ್ ನಿರೀಕ್ಷಕರಾದ ಮಂಜುನಾಥ, ರಾಜೇಂದ್ರ ನಾಯ್ಕ ರವರು ಮಂಗಳೂರು ಮತ್ತು ಉಡುಪಿ ಲೋಕಾಯುಕ್ತ ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles