ಮಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಏಪ್ರಿಲ್ 19 ಮತ್ತು 20 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಏಪ್ರಿಲ್ 19 – ಧರ್ಮಸ್ಥಳದಲ್ಲಿ ವಾಸ್ತವ್ಯ, ಏಪ್ರಿಲ್ 20 ರಂದು ಬೆಳಿಗ್ಗೆ 11 – ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ನೂತನ ಸಭಾಭವನ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 12 – ಗುರುವಾಯನಕೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ, 2:30 – ಎಕ್ಸೆಲ್ ವಿದ್ಯಾಸಂಸ್ಥೆಗೆ ಭೇಟಿ, ಬಳಿಕ ರಾಘವೇಂದ್ರ ಮಠ ಲಾಯಿಲಾ ಬ್ರಹ್ಮಕಲಶÀ ಕಾರ್ಯಕ್ರಮದಲ್ಲಿ ಭಾಗವಹಿಸುವುದು, 3- ಕನ್ಯಾಡಿ ಶ್ರೀರಾಮ ಮಂದಿರ ಭೇಟಿ, ಸಂಜೆ 4 – ಶ್ರೀ ಕ್ಷೇತ್ರ ಧರ್ಮಸ್ಥಳದ ಕಲ್ಯಾಣ ಮಂಟಪಗಳ ಸಮುಚ್ಛಯ ಉದ್ಘಾಟನೆ ಹಾಗೂ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಪೂಜೆ , ರಾತ್ರಿ 8 – ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಉಪಮುಖ್ಯಮಂತ್ರಿಗಳು ಬೆಂಗಳೂರಿಗೆ ತೆರಳಲಿದ್ದಾರೆ.
