21.7 C
Karnataka
Saturday, November 16, 2024

“ಧರ್ಮದೈವ” ತುಳು ಚಲನಚಿತ್ರ ತೆರೆಗೆ

ಮಂಗಳೂರು: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿಯವರ ನಿರ್ಮಾಣದಲ್ಲಿ ತಯಾರಾದ ಧರ್ಮದೈವ ತುಳು ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಬಿಡುಗಡೆ ಮಾಡಿ ಶುಭ ಹಾರೈಸಿದರು. ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಮಾತನಾಡಿ , “ಧರ್ಮದೈವ ಈಗಾಗಲೇ ದೇಶ ವಿದೇಶಗಳಲ್ಲಿ ಪ್ರೀಮಿಯರ್ ಶೋ ಪ್ರದರ್ಶನ ಕಂಡಿದೆ. ನೋಡಿದವರೆಲ್ಲರೂ ಸಿನಿಮಾ ಕುರಿತು ಮುಕ್ತವಾಗಿ ಶ್ಲಾಘಿಸಿದ್ದಾರೆ. ಬಹಳ ಕಠಿಣ ಪರಿಶ್ರಮದಿಂದ ಸಿನಿಮಾ ಮಾಡಿದ್ದಾರೆ. ಎಲ್ಲರೂ ಸಿನಿಮಾ ನೋಡಿ ಆಶೀರ್ವದಿಸಿ” ಎಂದರು.
ಮುಂಬೈ ಹೇರಂಭ ಇಂಡಸ್ಟ್ರಿಸ್ ನ ಸಿಎಂಡಿ ಕನ್ಯಾನ‌ ಕೂಳೂರು ಸದಾಶಿವ ಶೆಟ್ಟಿ ಮಾತನಾಡಿ, “ಧರ್ಮದೈವ ತುಳುನಾಡಿನ ಕಾರಣಿಕ ಶಕ್ತಿಗಳ ಕುರಿತಾದ ಸಿನಿಮಾ. ಸಿನಿಮಾ ಗೆಲ್ಲಲು ಪ್ರೇಕ್ಷಕರ ಬೆಂಬಲ ಬೇಕೇ ಬೇಕು. ಎಲ್ಲರೂ ಸಿನಿಮಾ ನೋಡಿ ಗೆಲ್ಲಿಸಿ” ಎಂದರು.
ದೇವದಾಸ್ ಕಾಪಿಕಾಡ್ ಮಾತನಾಡಿ, “ಧರ್ಮದೈವ ಸಿನಿಮಾ ದೈವಗಳ ಕುರಿತು ಯಾವುದೇ ವಿಡಂಬನೆ ಇಲ್ಲದೆ ತುಳುನಾಡಿನ ದೈವಗಳ ಶಕ್ತಿಯನ್ನು ಜಗತ್ತಿಗೆ ಪರಿಚಯಿಸುವ ಸಿನಿಮಾ. ಇಂದು ಮಲಯಾಳಂ ಸಿನಿಮಾಗಳು ಸಾಲು ಸಾಲು ಗೆಲ್ಲುತ್ತಿವೆ. ತುಳು ಸಿನಿಮಾ ರಂಗದಲ್ಲೂ ಅಂಥ ವಿಭಿನ್ನ ಸಿನಿಮಾಗಳು ಬರಬೇಕು” ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ , ಭಾಗವತ ಪಟ್ಲ ಸತೀಶ್ ಶೆಟ್ಟಿ , ಉದ್ಯಮಿ ಕೆ ಕೆ ಶೆಟ್ಟಿ, ತುಳು ಚಲನ‌ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್. ಧನರಾಜ್, , ಪ್ರಕಾಶ್ ಪಾಂಡೇಶ್ವರ್, ಸ್ವರಾಜ್ ಶೆಟ್ಟಿ, ರಮೇಶ್ ರೈ ಕುಕ್ಕುವಳ್ಳಿ, ಚೇತನ್ ರೈ ಮಾಣಿ, ಭೋಜರಾಜ್ ವಾಮಂಜೂರ್, ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕಳ, ಇಸ್ಮಾಯಿಲ್ ಮೂಡುಶೆಡ್ಡೆ, ಪ್ರದೀಪ್ ಆಳ್ವ ಕದ್ರಿ, ಭಾಸ್ಕರ್ ರೈ ಕುಕ್ಕುವಳ್ಳಿ, ಕೆ ಕೆ ಪೇಜಾವರ, ದಯಾನಂದ ಕತ್ತಲ್ ಸಾರ್, ಸುಹಾನ್ ಆಳ್ವ, ರೂಪಾ ವರ್ಕಾಡಿ, ಚಂದ್ರಹಾಸ ಆಳ್ವ, ಹೇಮಂತ್ ಸುವರ್ಣ,_ನಿರ್ಮಾಪಕ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿ, ನಿರ್ದೇಶಕ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ಮತ್ತಿತರರು ಉಪಸ್ಥಿತರಿದ್ದರು. ಲಿಖಿತ್ ರೈ ಕಾರ್ಯಕ್ರಮ‌ ನಿರ್ವಹಿಸಿದರು.‌
“ಧರ್ಮ ದೈವ” ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ನಟರಾಜ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ ತೆರೆಕಂಡಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles