ಮಂಗಳೂರು : ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಪುತ್ರ ಪಿಯುಸಿ ವಿದ್ಯಾರ್ಥಿ ದಿಗಂತ್ ಅವರು ನಿಗೂಡ ನಾಪತ್ತೆಯಾಗಿ 5 ದಿನಗಳು ಕಳೆದರೂ ಪೊಲೀಸ್ ಇಲಾಖೆ ಹಾಗೂ ಸರಕಾರದ ಯಾವುದೇ ರೀತಿಯ ಕಾರ್ಯಾಚರಣೆ ಯಶಸ್ವಿ ಕಾಣದೆ ಇರುವುದರಿಂದ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಫರಂಗಿಪೇಟೆಯಲ್ಲಿ ಸ್ವಯಂ ಪ್ರೇರಿತ ಬಂದ್ ಆಚರಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ದಿಗಂತ್ ನಾಪತ್ತೆಯ ಹಿಂದೆ ಸ್ಥಳೀಯ ಗಾಂಜಾ ದಂದೆಯ ಜನರು ಇದ್ದು ಪೊಲೀಸರು ಪ್ರಕರಣದ ತನಿಖೆಯನ್ನು ಸರಿಯಾಗಿ ನಡೆಸುತ್ತಿಲ್ಲ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸೂಕ್ತ ತನಿಖೆಗೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಸಂಸದ ಬ್ರಿಜೇಶ್ ಚೌಟ,ಶಾಸಕರಾದ ಡಾ. ವೈ ಭರತ್ ಶೆಟ್ಟಿ, ಹರೀಶ್ ಪೂ೦ಜ, ಸತೀಶ್ ಕುಂಪಲ, ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನೆಯಲ್ಲಿ ಪ್ರಸಾದ್ ಕುಮಾರ್ ರೈ, ರವೀಂದ್ರ ಕಂಬಳಿ, ಭರತ್ ಕುಮ್ಡೆಲು, ಉಮೇಶ್ ಶೆಟ್ಟಿ ಬರ್ಕೆ, ತಾರಾನಾಥ ಕೊಟ್ಟಾರಿ, ಫಾರೂಕ್ ಫರಂಗಿಪೇಟೆ, ರಮ್ಲಾನ್, ನಂದನ್ ಮಲ್ಯ, ಮನೋಜ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು
