ಮಂಗಳೂರು: ಮಂಗಳೂರಿನ ಬೈಕಂಪಾಡಿಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ದಲ್ಲಿ 2024-25ನೇ ಸಾಲಿನ ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ 60 ವಿದ್ಯಾರ್ಥಿಗಳಿಗೆ, ಡಿಪ್ಲೋಮಾ ಇನ್ ಪ್ರಿಶಿಷನ್ ಮಾನ್ಯಫ್ಯಾಕ್ಚರಿಂಗ್ ವಿಭಾಗದಲ್ಲಿ 30 ವಿದ್ಯಾರ್ಥಿಗಳಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ.
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ನೇರವಾಗಿ ಕಾಲೇಜಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ದ್ವಿತೀಯ ಪಿ.ಯು.ಸಿ. (ವಿಜ್ಞಾನ) ಅಥವಾ ಐ.ಟಿ.ಐ. ತರಬೇತಿ ಪಡೆದ ವಿದ್ಯಾರ್ಥಿಗಳು ನೇರವಾಗಿ ದ್ವಿತೀಯ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶ ಪಡೆಯಬಹುದು. ಅರ್ಹ ವಿದ್ಯಾರ್ಥಿಗಳಿಗೆ ಸರಕಾರದಿಂದ ವಿದ್ಯಾರ್ಥಿವೇತನ ಕಲ್ಪಿಸಿಕೊಡಲಾಗುವುದು. ಕರ್ನಾಟಕ ಸರಕಾರದ ಕೌಶಲ್ಯಾಭಿವೃದ್ಧಿ ಇಲಾಖೆಯ ಅಡಿಯಲ್ಲಿರುವ ಡಿಪ್ಲೋಮಾ ಕೋರ್ಸುಗಳು 3+1 ಪಠ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿಯನ್ನು ಒದಗಿಸಿಕೊಡಲಾಗುವುದು ಹಾಗೂ ಈ ಕೋರ್ಸ್‍ಗಳನ್ನು ಅಧ್ಯಯನ ಮಾಡುವಾಗ 3 ವರ್ಷದ ಡಿಪ್ಲೋಮಾ ತರಬೇತಿ ಪಡೆದ ನಂತರ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರತಿಷ್ಟಿತ ಕಂಪೆÀನಿಗಳಲ್ಲಿ ಕಡ್ಡಾಯ ಒಂದು ವರ್ಷದ ಇಂಟರ್ನ್‍ಶಿಪ್ ತರಬೇತಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಮಾಸಿಕ ರೂ.15,000 ದಿಂದ ರೂ. 20,000 ಶಿಷ್ಯವೇತನ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. 7ಇ, ಕೈಗಾರಿಕಾ ವಲಯ, ಬೈಕಂಪಾಡಿ, ಮಂಗಳೂರು-575011 ಮೊಬೈಲ್ ನಂ: 8073208137, 9008263660, 9535423533, 0824-2408003, 9481265587, 9741667257 ಹಾಗೂ 9483920114 ಸಂಪರ್ಕಿಸಬಹುದು ಎಂದು ಜಿ.ಟಿ.ಟಿ.ಸಿ. ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.