ಮ೦ಗಳೂರು : ಮುಂಬರುವ ಲೋಕಸಭಾ ಚುನಾವಣಾ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆ ಕುರಿತು ದ.ಕ.ಜಿಲ್ಲಾ ಲೋಕಸಭಾ ಚುನಾವಣಾ ಉಸ್ತುವಾರಿ ಮಧು ಬಂಗಾರಪ್ಪ ಅವರು ಡಿ.2ರಂದು ಸಂಜೆ 5:30ಕ್ಕೆ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಸಿ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.
ಈ ಸಂದರ್ಭ ಜಿಲ್ಲೆಯ ಎಲ್ಲಾ ಪ್ರಮುಖ ನಾಯಕರುಗಳು ಉಪಸ್ಥಿತಲಿರುವರು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.