ಮಂಗಳೂರು: ನಿಯಮಾನುಸಾರ ನೋಂದಣಿ ಮಾಡದೆ ಖಾಸಗಿ ಆಸ್ಪತ್ರೆಯಲ್ಲಿ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಆರೋಗ್ಯ ಇಲಾಖೆ ವಶಪಡಿಸಿಕೊಂಡಿದೆ.
ಬೆಳ್ತಂಗಡಿ ಖಾಸಗಿ ಆಸ್ಪತ್ರೆಯೊ೦ದಕ್ಕೆ ಗುರುವಾರ ಭೇಟಿ ನೀಡಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ ಅವರು ನೇತೃತ್ವದಲ್ಲಿ ಅಧಿಕಾರಿ ತಂಡವು ತಪಾಸನೆಯನ್ನು ನಡೆಸಿದ ವೇಳೆ ನೋಂದಣಿ ಮಾಡದೆ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರ ಕಂಡು ಬಂದಿದೆ. ಸ್ಕ್ಯಾನಿಂಗ್ ಯಂತ್ರವನ್ನು ಬಳಸಲು ನಿಯಮಾನುಸಾರ ಆರೋಗ್ಯ ಇಲಾಖೆಯಲ್ಲಿ ನೊಂದಣಿ ಮಾಡದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ತಕ್ಷಣವೇ ಸ್ಕ್ಯಾನಿಂಗ್ ಯಂತ್ರವನ್ನು ವಶಪಡಿಸಿಕೊಂಡು ಜಪ್ತಿ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದೀಪಾ ಪ್ರಭು ಮತ್ತಿತ್ತರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಮುಂದಿನ ದಿನಗಳಲ್ಲಿ ಅಕ್ರಮವಾಗಿ ಸ್ಕ್ಯಾನಿಂಗ್ ಯಂತ್ರ ಬಳಕೆ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸುವುದಾಗಿ ಜಿಲ್ಲಾ ಆರೋಗ್ಯ ಅಧಿಕಾರಿ ಎಚ್ಚರಿಸಿದ್ದಾರೆ.