ಮಂಗಳೂರು:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜನವರಿ 23ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಮಂಗಳವಾರ ಬೆಳಿಗ್ಗೆ 8.15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 10ಗಂಟೆಗೆ ಸುಳ್ಯಕ್ಕೆ ಆಗಮನ. 10.30ಕ್ಕೆ- ಸುಳ್ಯ, ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯ/ ಆಶ್ರಮ ಶಾಲೆಯ ಕಟ್ಟಡದ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮ, 11 ಗಂಟೆಗೆ- ಸುಳ್ಯ ಕೆವಿಜಿ ಪುರಭವನದಲ್ಲಿ ಜನತಾದರ್ಶನ. ಮಧ್ಯಾಹ್ನ 3.15ಕ್ಕೆ- ಸುಳ್ಯ ಕಾಂಗ್ರೆಸ್ ಕಚೇರಿಗೆ ಭೇಟಿ ಕಾರ್ಯಕರ್ತರ ಜೊತೆ ಸಂವಾದ. ಸಂಜೆ 5.30ಕ್ಕೆ- ಮಂಗಳೂರಿಗೆ ಆಗಮನ. 5.45ಕ್ಕೆ- ನಗರದ ಕೊಡಿಯಾಲ್ ಬೈಲ್‍ನಲ್ಲಿ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರ ಕಚೇರಿ ಕಟ್ಟಡದ ಶಿಲನ್ಯಾಸ ಕಾರ್ಯಕ್ರಮ, ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕಾ ವಿಶ್ವವಿದ್ಯಾಲಯದ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಾದೇಶಿಕ ಪಶು ರೋಗ ತಪಾಸಣಾ ಪ್ರಯೋಗಾಲಯ ಇದರ ನೂತನ ಕಟ್ಟಡದ ಉದ್ಘಾಟನೆ. ರಾತ್ರಿ 7- ಮೂಡಬಿದ್ರೆಯ ಅರ್ಜುನಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ. 8.30ಕ್ಕೆ -ಮಂಗಳೂರು ಸಕ್ರ್ಯೂಟ್ ಹೌಸ್, ರಾತ್ರಿ 11.20ಕ್ಕೆ- ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.