17.9 C
Karnataka
Saturday, November 23, 2024

ಮನುಷ್ಯತ್ವವೇ ಬಸವಣ್ಣನವರ ಮುಖ್ಯ ತತ್ವ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಯಾವುದೇ ತಾರತಮ್ಯವಿಲ್ಲದ ಪ್ರತಿಯೊಬ್ಬರೂ ಗೌರವದಿಂದ ಬದುಕುವ ಸಮಾಜದ ನಿರ್ಮಾಣಕ್ಕೆ ಪರಿಶ್ರಮಿಸಿದ ಬಸವಣ್ಣನವರ ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನೆಮ್ಮದಿಯ ಜೀವನ ರೂಪಿಸಿಕೊಳ್ಳಬೇಕು ಎಂದು ಆರೋಗ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು. ಬಸವಣ್ಣನವರು 12ನೇ ಶತಮಾನದಲ್ಲಿಯೇ ಅಸ್ಪೃಶ್ಯತೆ, ಜಾತಿ ವ್ಯವಸ್ಥೆಗಳ ವಿರುದ್ಧ ಧ್ವನಿ ಎತ್ತಿದವರು, ಸಾಂಸ್ಕೃತಿಕ ನಾಯಕ ಎಂಬ ಬಿರುದನ್ನು ಹೊಂದಿರುವ ಅವರು ಅರ್ಹ ವ್ಯಕ್ತಿಯಾಗಿದ್ದಾರೆ. ಬಸವಣ್ಣನವರ ಚಿಂತನೆಯಲ್ಲಿ ತಪ್ಪು ಕಂಡು ಹಿಡಿಯಲು ಸಾಧ್ಯವಿಲ್ಲ, ಶೋಷಿತ ಸಮಾಜದ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಮ್ಮ ವಚನ ಸಾಹಿತ್ಯದ ಮೂಲಕ ಸರಳ ರೀತಿಯಲ್ಲಿ ಮನಮುಟ್ಟುವಂತೆ ವಿವರಿಸಿದ್ದಾರೆ. ದೇಶದಲ್ಲಿ ಕ್ರಾಂತಿಕಾರಿ ಸುಧಾರಣೆಯನ್ನು ತರುವಲ್ಲಿ ಬಸವಣ್ಣನವರಿಗೆ ಸರಿಸಾಟಿ ಯಾರು ಇಲ್ಲ. ಬಸವಣ್ಣನವರ ಚಿಂತನೆಗಳು ಪರಿಕಲ್ಪನೆಗಳು ಎಲ್ಲರಿಗೂ ಮಾದರಿ ಉತ್ತಮ ಸಮಾಜದ ನಿರ್ಮಾಣಕ್ಕಾಗಿ ಶಾಂತಿ ಸುವ್ಯವಸ್ಥೆಗಾಗಿ ನಾವೆಲ್ಲರೂ ಬಸವಣ್ಣನವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು.
ಜಿಲ್ಲಾಧಿಕಾರಿ, ಮುಲೈ ಮುಗಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಅಪರ ಜಿಲ್ಲಾಧಿಕಾರಿ ರಾಜು ಕೆ, ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮಹಾಪಾತ್ರ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿದರು. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles