ಮ೦ಗಳೂರು: ಆರೋಗ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸರ್ಕಿಟ್ ಹೌಸ್‌ನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿವಿಧ ಮುಖಂಡರೊಂದಿಗೆ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಈಗಾಗಲೇ ಜಾರಿಯಾಗಿರುವ ಯೋಜನೆಗಳು ಜನರಿಗೆ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲಾಯಿತು. ಜಿಲ್ಲೆಯ ಅಭಿವೃದ್ಧಿ ನಿಟ್ಟಿನಲ್ಲಿ ಈಗಾಗಲೇ ನೀಡಿರುವ ಅನುದಾನಗಳನ್ನು ಬಳಸಿಕೊಂಡು ಕ್ರಿಯಾತ್ಮಕವಾಗಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಸಚಿವರು ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ ಸಿಇಓ ಡಾ. ಆನಂದ್, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಶಾಸಕ ಹರೀಶ್ ಕುಮಾರ್, ಮಾಜಿ ಸಚಿವ ಅಭಯ ಚಂದ್ರ ಮತ್ತಿತರರು ಉಪಸ್ಥಿತರಿದ್ದರು.
