ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನವೆಂಬರ್ 16 ರಿಂದ 18ರ ವರೆಗೆ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ನವೆಂಬರ್ 16ರ ಗುರುವಾರ ರಾತ್ರಿ 9.25ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ರಾತ್ರಿ 11 ಗಂಟೆಗೆ ಸುಳ್ಯಕ್ಕೆ ತೆರಳಿ ಅರಣ್ಯ ಇಲಾಖೆ ವಸತಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ನವೆಂಬರ್ 17ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಸುಳ್ಯ ತಾಲೂಕಿನ ಕುಡಿಯುವ ನೀರಿನ ಯೋಜನೆಗೆ ಶಂಕು ಸ್ಥಾಪನೆ ಮಾಡುವರು, 11.35ಕ್ಕೆ ವೆಂಟೆಡ್ ಡ್ಯಾಮ್ ವೀಕ್ಷಣೆ ಮಾಡುವರು. ಮಧ್ಯಾಹ್ನ 12.30ಕ್ಕೆ ಬಾಳಲಿ ಆಶ್ರಮ ಶಾಲೆಯ ಹಾಸ್ಟೆಲ್ ಕಟ್ಟಡ ಉದ್ಘಾಟನೆ ಕಾರ್ಯಕ್ರಮ, ಮಧ್ಯಾಹ್ನ 1 ಗಂಟೆಗೆ ಸುಳ್ಯ ತಾಲೂಕು ಆಸ್ಪತ್ರೆಗೆ ಭೇಟಿ, ಅಪರಾಹ್ನ 3 ಗಂಟೆಗೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವÀರು. ಸಂಜೆ 6 ಗಂಟೆಗೆ ಚೆನ್ನಕೇಶವ ದೇವಸ್ಥಾನದ ಸಮೀಪವಿರುವ ಪ್ರಭು ಮೈದಾನದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ‘ಎ’ಗ್ರೇಡ್ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನಾ ಸಮಾರಂಭ, ರಾತ್ರಿ 8.30ಕ್ಕೆ ಬಜ್ಪೆ ಲೆಜೆನ್ಸ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ, 10.30ಕ್ಕೆ ಕದ್ರಿಯ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ನವೆಂಬರ್ 18ರ ಶನಿವಾರ ಬೆಳಿಗ್ಗೆ 9.15ಕ್ಕೆ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು, 10.30ಕ್ಕೆ ಉರ್ವ ಕ್ರಿಕೆಟ್ ಮೈದಾನದಲ್ಲಿ ನಡೆಯುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡಿರುವ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಮಧ್ಯಾಹ್ನ 12 ಗಂಟೆಗೆ ಪಿಲಿಕುಳ ನಿಸರ್ಗಧಾಮಕ್ಕೆ ಭೇಟಿ ನೀಡುವರು ಮತ್ತು ವನ್ಯ ಪ್ರಾಣಿಗಳ ಆವರಣಗಳ ಉದ್ಘಾಟನೆ ಮಾಡುವರು. ಸಂಜೆ 6.40ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.