ಮಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಜಿಲ್ಲೆಯ ಅರ್ಹ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಸರಬರಾಜು ಆಗಿರುವ ವಿವಿಧ ಕಿಟ್‍ಗಳ ವಿತರಣೆ ಡಿಸೆಂಬರ್ 5ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಅರ್ಹ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಮೇಸನ್, ಎಲೆಕ್ಟ್ರೀಷಿಯನ್, ವೆಲ್ಡರ್ ಹಾಗೂ ಟೈಲ್ ಲೇಯರ್ ಟೂಲ್ ಕಿಟ್‍ಗಳನ್ನು ವಿತರಿಸಲಿದ್ದಾರೆ ಎಂದು ಮಂಗಳೂರು ವಿಭಾಗ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
