34.4 C
Karnataka
Friday, May 1, 2026

ಮಹಾನಗರಪಾಲಿಕೆ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ಮ೦ಗಳೂರು: ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಸೋಮವಾರ ಮಂಗಳೂರು ಮಹಾನಗರಪಾಲಿಕೆ ಕಚೇರಿಗೆ ಭೇಟಿ ನೀಡಿದರು.
ಪಾಲಿಕೆಯ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದ ಅವರು ಬಳಿಕ ನಗರಪಾಲಿಕೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ನಗರದಲ್ಲಿ ಚಾಲನೆಯಲ್ಲಿರುವ ವಿವಿದ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆದ ಅವರು, ಪ್ರವಾಹ ನಿಯಂತ್ರಣಕ್ಕೆ ನಡೆದಿರುವ ಕಾಮಗಾರಿಗಳ ಕುರಿತು ಚರ್ಚಿಸಿದರು.
ನಂತರ, ಸ್ಮಾರ್ಟ್ ಸಿಟಿ ಕಚೇರಿಗೆ ಭೇಟಿ ಕೊಟ್ಟು ಇದುವರೆಗೆ ನಡೆದಿರುವ ಯೋಜನೆಗಳ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್. ಸ್ಮಾರ್ಟ್ ಸಿಟಿ ಎಂ ಡಿ ರಾಜು ಮತ್ತಿತರರು ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles