24.8 C
Karnataka
Thursday, April 30, 2026

ಮಂಗಳೂರು ದಸರಾ ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರು

ಮ೦ಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಮಂಗಳೂರು ದಸರಾ ಉತ್ಸವ ಸಿದ್ಧತೆಗಳ ಪರಿಶೀಲನೆ ನಡೆಸಿದರು.
ನಗರದ ಸರ್ಕ್ಯುಟ್ ಹೌಸ್ ನಲ್ಲಿ ಈ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ದಸರಾ ಕಾರ್ಯಕ್ರಮಗಳ ಸಂದರ್ಭದಲ್ಲಿ ನಗರವನ್ನು ಅಲಂಕರಿಸುವ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸೂಚಿಸಿದರು. ನಗರದಾದ್ಯಂತ ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ನಗರದ ಪ್ರಮುಖ ಜಂಕ್ಷನ್ ಗಳನ್ನು ಅಲಂಕರಿಸಬೇಕು. ದಸರಾ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ನಿರಂತರ ಸ್ವಚ್ಛತೆ ಕಾಪಾಡಲು ತಂಡ ನಿಯೋಜಿಸಬೇಕು. ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳು ಸದಾ ಲಭ್ಯವಾಗುವಂತೆ ನಿಗವಹಿಸಬೇಕು ಎಂದು ಸಚಿವರು ಸೂಚಿಸಿದರು. ಪೊಲೀಸ್ ಭದ್ರತೆಯನ್ನು ಎಲ್ಲಾ ಕಡೆ ಕಲ್ಪಿಸಲು ದಿನೇಶ್ ಗುಂಡೂರಾವ್ ತಿಳಿಸಿದರು.
ಸಭೆಯಲ್ಲಿ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಪೊಲೀಸ್ ವರಿಷ್ಟಾಧಿಕಾರಿ ಅರುಣ್ ಕೆ. , ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮತ್ತಿತರರು ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles