ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಅವರು ನ.16 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ನ.16 ರಂದು ಬೆಳಿಗ್ಗೆ 10.15ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ. 10.40ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯ ಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ 2024 ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಡ್ಡೂರು-ಪೊಳಲಿ ಸೇತುವೆಯ ಧಾರಣಾ ಸಾಮಥ್ರ್ಯ ಹೆಚ್ಚಿಸುವ ಬಗ್ಗೆ ಸಭೆ, 12.30ಕ್ಕೆ ಸಚಿವರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ, 3 ಗಂಟೆಗೆ ಲೇಡಿಗೋಷನ್ ಆಸ್ಪತ್ರೆ ಸಭಾಂಗಣದಲ್ಲಿ ವೆನ್ಲಾಕ್ ಮತ್ತು ಲೇಡಿಘೋಷನ್ ಆಸ್ಪತ್ರೆಗಳ ಪ್ರಗತಿ ಪರಿಶೀಲನಾ ಸಭೆ, ಸಂಜೆ 6.40 ಬೆಂಗಳೂರಿಗೆ ತೆರಳಲಿದ್ದಾರೆ.