24.9 C
Karnataka
Friday, November 15, 2024

ಜನಾಭಿಪ್ರಾಯ ರೂಪಿಸುವಲ್ಲಿ ಮಾಧ್ಯಮಗಳು ಮಹತ್ವದ ಪಾತ್ರ ವಹಿಸುತ್ತಿವೆ- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯ್ಂತ್

ಮಂಗಳೂರು: ಮಾಧ್ಯಮಗಳು ಜನಾಭಿಪ್ರಾಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾ ಬಂದಿವೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯಂತ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ವತಿಯಿಂದ ಹಮ್ಮಿ ಕೊಂಡಿದ್ದ ಭಾರತೀಯ ಕಾರ್ಯ ನಿರತ ಪತ್ರಕರ್ತರ ಒಕ್ಕೂಟದ 74 ನೇ ದಿನಾಚರಣೆ ನಗರದ ಪತ್ರಿಕಾಭವನದಲ್ಲಿಂದು ಉದ್ಘಾಟಿಸಿ ಮಾತನಾಡಿದ ಅವರು ಜನರಿಗೆ ಸುದ್ದಿ ಗಳನ್ನು ತಿರುಚದೆ ಸತ್ಯ ಸಂಗತಿಗಳನ್ನು ತಿಳಿಸುವ ಮಾಧ್ಯಮಗಳು ಜನರನ್ನು ಎಚ್ಚರಿಸುತ್ತದೆ.ಹಲವಾರು ಹಿರಿಯ ಪತ್ರಕರ್ತರ ವಿಶ್ಲೇಷಣಾತ್ಮಕ ವರದಿಗಳು ಉಪಯುಕ್ತ ಮಾಹಿತಿ ನೀಡುವ ಮೂಲಕ ಜನಾಭಿಪ್ರಾಯ ರೂಪಿಸುವಲ್ಲಿ ಸಕಾರಾತ್ಮಕ ಬೆಳವಣಿಗೆ ಯಲ್ಲಿ ಮಹತ್ವದ ಪಾತ್ರವಹಿ ಸುತ್ತಾ ಬಂದಿದೆ ಎಂದು ರಿಷ್ಯ್ಂತ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ‌ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.ಭಾರತೀಯ ಕಾರ್ಯ ನಿರತ ಪತ್ರಕರ್ತರ ಸಂಘದ ಆಡಳಿತ ಮಂಡಳಿಯ ಸದಸ್ಯ ಪಿ.ಬಿ.ಹರೀಶ್ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯ ನಿರ್ದೇಶಕ ಖಾದರ್ ಶಾ, ಪತ್ರಕರ್ತರ ಸಂಘದ ಪೂರ್ವಾಧ್ಯಕ್ಷ ಆನಂದಶೆಟ್ಟಿ,ಪ್ರೆಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ರಾಜ್ಯ ಕಾರ್ಯ ಕಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯ ಇಬ್ರಾಹಿಂ ಅಡ್ಕಸ್ಥಳ,ಕಾರ್ಯಕ್ರಮ ನಿರ್ದೇಶಕ ರಾಜೇಶ್ ದಡ್ಡಂಗಡಿ,ಉಪಾಧ್ಯಕ್ಷ ಭಾಸ್ಕರ್ ರೈ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.
ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯ ಕ್ರಮ ನಿರೂಪಿಸಿದರು. ಹಿರಿಯ ಪತ್ರಕರ್ತ ಶೇಖರ ಅಜೆಕಾರು ಅವರ ಅಕಾಲಿಕ ನಿಧನಕ್ಕೆ ಸಭೆಯಲ್ಲಿ ಮೌನ ಪ್ರಾರ್ಥನೆಯ ಮೂಲಕ ಸಂತಾಪ ಸೂಚಿಸಲಾಯಿತು

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles