ಮಂಗಳೂರು: ಕರ್ನಾಟಕ ಸಂಘ ಕತಾರ್ ಅಧ್ಯಕ್ಷರಾಗಿ ಡಾ ಎಂ ರವಿ ಶೆಟ್ಟಿ ಮೂಡಂಬೈಲ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಕರ್ನಾಟಕ ಸಂಘ ಕತಾರ್ ತನ್ನ 25 ನೇ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅಧ್ಯಕ್ಷರಾಗಿ ಡಾ ಎಂ ರವಿ ಶೆಟ್ಟಿ ಆಯ್ಕೆಯಾಗಿದ್ದಾರೆ.
ಕತಾರ್ ನಲ್ಲಿ ಕನ್ನಡ ಸಂಘದ ಮೂಲಕ ರವಿ ಶೆಟ್ಟಿ ಅವರು ಅನೇಕ ಸಮಾಜ ಪರ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ವಿದೇಶದಲ್ಲಿ ಅವರು ಮಾಡಿರುವ ಕೆಲಸ ಕಾರ್ಯಗಳನ್ನು ಗುರುತಿಸಿ ಈಗಾಗಲೇ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಕರ್ನಾಟಕ ರಾಜ್ಯ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿಗಳು ಒಲಿದು ಬಂದಿದೆ.