ಮಂಗಳೂರು: ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಎ೦ಡಿಎ೦ಎ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ.ಉಳ್ಳಾಲ ತಾಲೂಕು ಹರೆಕಳ ಗ್ರಾಮದ ನಿವಾಸಿ, ಪ್ರಸ್ತುತ ಬಜಾಲ್ ಪಡ್ಪುನಲ್ಲಿ ವಾಸವಿರುವ ಹಸೈನಾರ್ @ ಅಚ್ಚು(32) ಬ೦ಧಿತ ಆರೋಪಿ.
ನಗರದ ಪಡೀಲ್ ಪರಿಸರದಲ್ಲಿ ವ್ಯಕ್ತಿಯೋರ್ವನು ಎ೦ಡಿಎ೦ಎ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ಒಟ್ಟು 12 ಗ್ರಾಂ ತೂಕದ ರೂ. 60,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊ೦ಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 70,500/-ಆಗಬಹುದು. ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.ಈತನ ವಿರುದ್ದ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಹಲ್ಲೆ ಪ್ರಕರಣ ಮತ್ತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 3 ಪ್ರಕರಣಗಳು ದಾಖಲಾಗಿರುತ್ತದೆ.