ಮಂಗಳೂರು : ದಸರಾ ಆಚರಣೆ ನಮ್ಮ ಸಂಸ್ಕೃತಿಯ ಪ್ರತೀಕವಾಗಿದ್ದು , ಉತ್ಸವಕ್ಕೆ ಇನ್ನಷ್ಟು ಮೆರುಗು ನೀಡುವ ಉದ್ದೇಶದಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್.ಆರ್ .ಪೂಜಾರಿ ಹೇಳಿದರು.
ಶರಧಿ ಪ್ರತಿಷ್ಠಾನದ ವತಿಯಿಂದ ಮಂಗಳೂರು ದಸರಾ ಅಂಗವಾಗಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆದ ಮುದ್ದು ಶಾರದೆ ಮತ್ತು ನವದುರ್ಗೆ ವೇಷ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ದಸರಾ ಅಂಗವಾಗಿ ಈ ಬಾರಿ ಮ್ಯಾರಥಾನ್, ಬಹುಭಾಷಾ ಕವಿಗೋಷ್ಠಿ ನಡೆಸಿದ್ದು, ಶರಧಿ ಪ್ರತಿಷ್ಠಾನದ ಮುದ್ದು ಶಾರದೆ ಸ್ಪರ್ಧೆಗೆ ಕುದ್ರೋಳಿ ಕ್ಷೇತ್ರದ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗಿದೆ ಎಂದರು.
ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ, ಉದ್ಯಮಿ ರಮೇಶ್ ನಾಯಕ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಶುಭ ಹಾರೈಸಿದರು.
ಮಾಲತಿ ಜನಾರ್ದನ ಪೂಜಾರಿ,ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕಾರ್ಯದರ್ಶಿ ಮಾಧವ ಸುವರ್ಣ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಅಮೃತ ವಿದ್ಯಾಲಯದ ಟ್ರಸ್ಟಿ ಯತೀಶ್ ಬೈಕಂಪಾಡಿ, ಅಮೃತ ವಿದ್ಯಾಲಯದ ಪ್ರಾಂಶುಪಾಲೆ ಅಕ್ಷತಾ ಶೆಣೈ , ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಮಂಗಳೂರು ವಲಯ ಸಮಿತಿ ಅಧ್ಗಕ್ಷ ಹರೀಶ್ ಅಡ್ಯಾರ್ , ಕಲಾವಿದ ದಿನೇಶ್ ಹೊಳ್ಳ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಶರಧಿ ಪ್ರತಿಷ್ಠಾನ ಅಧ್ಯಕ್ಷೆ ಸೌಜನ್ಯ ಶೆಟ್ಟಿ, ಕಾರ್ಯದರ್ಶಿ ಪುನೀಕ್ ಶೆಟ್ಟಿ ಉಪಸ್ಥಿತರಿದ್ದರು.ಜಗದೀಶ್ ಶೆಟ್ಟಿ ಬಿಜೈ ಸ್ವಾಗತಿಸಿದರು. ಮಧ್ವರಾಜ್ ಕಾರ್ಯಕ್ರಮ ನಿರೂಪಿಸಿದರು.