21.6 C
Karnataka
Thursday, November 14, 2024

ಮೇ20 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ

ಮಂಗಳೂರು: ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಕ್ಷೇತ್ರಗಳ 2024 ರ ಚುನಾವಣೆಗೆ ಮೇ. 9 ರಿಂದ ಮೇ. 16ರ ವರೆಗೆ ಸ್ವೀಕೃತವಾದ ನಾಮಪತ್ರಗಳ ಪರಿಶೀಲನೆಯನ್ನು ಮೇ. 17 ರಂದು ನಡೆಸಲಾಯಿತು.
ನೈರುತ್ಯ ಪದವೀಧರರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ನಾಮಪತ್ರಗಳೂ ಅಂಗೀಕೃತವಾಗಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 9 ನಾಮಪತ್ರಗಳು ಅಂಗೀಕೃತಗೊಂಡಿದೆ. ಪಕ್ಷೇತರ ಅಭ್ಯರ್ಥಿ ಎಂ. ಸತೀಶ್ ಕಾರಂತ್ ಅವರ ನಾಮಪತ್ರದಲ್ಲಿ ವಿಧಾನಸಭಾ ಮತದಾರರ ಪಟ್ಟಿಯ ದೃಢೀಕೃತ ಪ್ರತಿಯನ್ನು ಸಲ್ಲಿಸದಿರುವುದರಿಂದ ನಾಮಪತ್ರ ತಿರಸ್ಕೃತವಾಗಿದೆ.
ಮೇ. 20 ರವರೆಗೆ ನಾಮಪತ್ರಗ ಹಿಂಪಡೆಯಲು ಅವಕಾಶವಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳೂ ಆಗಿರುವ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಜಿ.ಸಿ. ಪ್ರಕಾಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚುನಾವಣಾ ವೀಕ್ಷಕರ ನೇಮಕ
ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಯ ಹಿನ್ನೆಲೆ ಭಾರತೀಯ ಚುನಾವಣಾ ಆಯೋಗವು ಹಿರಿಯ ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿದೆ.
ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಟಿ.ಕೆ ಹಾಗೂ ಸಹಾಯಕ ಅಧಿಕಾರಿಯಾಗಿ ಮೈಸೂರು ಜಿಲ್ಲೆಯ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ರುದ್ರೇಶ್ ಕೆ ಅವರನ್ನು ನೇಮಕ ಮಾಡಲಾಗಿದೆ. ಮೊ.ಸಂಖ್ಯೆ: 7204064565 ಅನ್ನು ಸಂಪಕಿಸಬಹುದು.
ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ ಹರ್ಷ ಗುಪ್ತ ಹಾಗೂ ಸಹಾಯಕ ಅಧಿಕಾರಿಯಾಗಿ ಮೈಸೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್ ಅವರನ್ನು ನೇಮಕ ಮಾಡಲಾಗಿದೆ. ಮೊ.ಸಂಖ್ಯೆ: 7204294565 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರೂ ಆಗಿರುವ ಡಾ ಜೆ.ಸಿ ಪ್ರಕಾಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles