25 C
Karnataka
Tuesday, November 19, 2024

ವಿಧಾನ ಪರಿಷತ್ತಿಗೆ ಚುನಾವಣೆ: ನಿಷೇಧಾಜ್ಞೆ

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಯ ಸಂಬಂದ ಜೂನ್ 3ರಂದು ಮತದಾನ ನಡೆಯಲಿದ್ದು, ಜೂನ್ 6ರಂದು ಮತಎಣಿಕೆ ಪ್ರಕ್ರಿಯೆಯು ನಡೆಯಲಿದೆ.

ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಹಾಗೂ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 2ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 3ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರಗಿಸುವುದನ್ನು ನಿಷೇಧಿಸಿದೆ. ಅಭ್ಯರ್ಥಿ ಅಥವಾ ಕಾರ್ಯಕರ್ತರು ಮತದಾರರನ್ನು ಮತಗಟ್ಟೆಗೆ ವಾಹನದಲ್ಲಿ ಕರೆತರುವುದು ಹಾಗೂ ಅಲ್ಲಿಂದ ಕರೆದುಕೊಂಡು ಹೋಗುವುದನ್ನು ನಿಷೇಧಿಸಿದೆ. ಶಸ್ತ್ರ, ಬಡಿಗೆ, ಬರ್ಜಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಟಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಮತದಾನದ ದಿನದಿಂದ ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ.

ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಚುನಾವಣ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು ಪದ ಹಾಡುವುದು ವಾದ್ಯ ಬಾರಿಸುವುದು ವ್ಯಾಖ್ಯಾನ ಕೊಡುವುದು ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಬ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು ಚಿಹ್ನೆಗಳು, ಪ್ರತಿ ಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಅಥವಾ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

ಚುನಾವಣಾ ಅವಧಿಯಲ್ಲಿ ಸಾರ್ವಜನಿಕ ಸಭೆಗಳನ್ನು ಕೈಗೊಳ್ಳುವಂತಿಲ್ಲ, ಮತದಾನದ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಪೋನು ಕ್ವಾಡ್ಲೆಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮತದಾನದ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಫೋಸ್ಟರ್ ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles