23 C
Karnataka
Friday, July 3, 2026

ಜುಲೈ 13 ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ

ಮಂಗಳೂರು: -ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಗೆ ಜುಲೈ 13 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಗೋರಿಗುಡ್ಡೆ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಆಸಕ್ತ ಪುರುಷ ಹಾಗೂ ಮಹಿಳೆಯರಿಗೆ ಪ್ರೇರೇಪಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪ್ರೋತ್ಸಾಹ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ.
ಕಾರ್ಯಕ್ರಮದಲ್ಲಿ 18 ರಿಂದ 50 ವರ್ಷ ವಯೋಮಿತಿಯ, ಓದಲು ಹಾಗೂ ಬರೆಯಲು ಬರುವ ದಕ್ಷಿಣ ಕನ್ನಡ ಜಿಲ್ಲೆಯ ಪುರುಷ ಹಾಗೂ ಮಹಿಳಾ ಸ್ವ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಬಹುದು.
ಅರ್ಜಿ ಸಲ್ಲಿಸಲು ಉರ್ವ ಮಾರ್ಕೆಟ್ ಕಟ್ಟಡದ ಎರಡನೇ ಮಹಡಿಯಲ್ಲಿರುವ ಸಿಡಾಕ್ ಉಪ ನಿರ್ದೇಶಕರ ಕಛೇರಿ (9448812974/ 9886035251, 8546894517) ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ ಪ್ರತಿಯನ್ನು ಕಛೇರಿಗೆ ಸಲ್ಲಿಸಬೇಕು ಎಂದು ಸಿಡಾಕ್ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles